ಉಡುಪಿ[ಮೇ.23]: ತೀವ್ರ ಕುತೂಹಲ ಮೂಡಿಸಿದ್ದ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿದೆ. ಕೇವಲ 10 ವರ್ಷಗಳಷ್ಟು ಹಳೆಯ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.

ಈ ಬಾರಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ತೀವ್ರ ಪೈಪೋಟಿ ನೀಡಿದ್ದರು. ಆದರೆ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿರುವ ಶೋಭಾ ಕರಂದ್ಲಾಜೆ ಒಂದು ಲಕ್ಷದ ಮತಗಳ ಅಂತದಿಂದ ಪ್ರಮೋದ್ ಮಧ್ವರಾಜ್ ರನ್ನು ಸೋಲಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಉಡುಪಿ ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಆರಂಭವಾಗಿದ್ದು, ಶೋಭಾಗೆ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವಕ್ಕೆ ಬಿಜೆಪಿ ಕಾರ್ಯಕರ್ತರು ನೆರೆದಿದ್ದಾರೆ.