ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ವಿವಿಧ ಪ್ರಮುಖ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಈಗಾಗಲೇ ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. 

ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಡಿ. ದೇವೇಗೌಡರ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಆಗಮಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. 

ಮೊದಲ ಹಂತದ ಪ್ರಚಾರ ಏ.4 ಮತ್ತು 5 ರಂದು ನಡೆಯಲಿದೆ. ಒಟ್ಟು ನಾಲ್ಕು ಅಥವಾ ಆರು ದಿನಗಳ ಕಾಲ ಪ್ರಚಾರ ಇರುತ್ತದೆ ಎಂದು ತಿಳಿಸಿದರು. 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಎರಡು ಮೈತ್ರಿಯಲ್ಲಿ ಚುನಾವಣೆ ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಪರಸ್ಪರ ಒಟ್ಟಾಗಿ ಪ್ರಚಾರ ಮಾಡುತ್ತಿದ್ದಾರೆ.