ಚಿತ್ರದುರ್ಗ ಕ್ಷೇತ್ರದಿಂದ ಭೋವಿ ಸಮಾಜಕ್ಕೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮುನಿಸಿಕೊಂಡಿರುವ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮಂಗಳವಾರ ಸಮಾಜದ ಮುಖಂಡರ ಸಭೆ ರಹಸ್ಯ ಸಭೆ ನಡೆಸಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಕ್ಷೇತ್ರದಿಂದ ಭೋವಿ ಸಮಾಜಕ್ಕೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮುನಿಸಿಕೊಂಡಿರುವ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಮಂಗಳವಾರ ಸಮಾಜದ ಮುಖಂಡರ ಸಭೆ ರಹಸ್ಯ ಸಭೆ ನಡೆಸಿದರು.
ಲೋಕಸಭಾ ಚುನಾವಣೆ ಯಲ್ಲಿ ಯಾರನ್ನು ಬೆಂಬಲಿಸಬೇಕು ಎನ್ನುವ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಸಮಾಜ ಕೈಗೊಂಡಿರುವ ನಿರ್ಣಯ ಯಾವುದು ಎಂಬ ಬಗ್ಗೆ ಮಾತ್ರ ಬಹಿರಂಗಪಡಿಸಿಲ್ಲ.
ಸಭೆ ನಂತರ ಗುರುಪೀಠದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಆದರೆ, ಮಂಗಳವಾರ ಅಂತಹ ಯಾವುದೇ ಪ್ರಕಟಣೆಗಳು ಹೊರಬಿದ್ದಿಲ್ಲ.
