ದೇಶದ ಗಮನ ಸೆಳೆಯುವ ಅಮೇಥಿಯಲ್ಲಿ ಅಖಾಡ ಸಿದ್ಧವಾಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ನಡುವೆ ಹಣಾಹಣಿ ನಡೆಯಲಿದೆ.

ಅಮೇಥಿ(ಏ.11) ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಹೋಮ-ಹವನ ಸೇರಿದಂತೆ ವಿವಿಧ ಪೂಜಾ ಕಾರ್ಯದಲ್ಲಿ ಪತಿಯೊಂದಿಗೆ ಪಾಲ್ಗೊಂಡರು.

ಇರಾನಿ ಅವರಿಗೆ ರೋಡ್ ಶೋ ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಪತಿಯೊಂದಿಗೆ ಸೇರಿ ಹೋಮ ಹವನದಲ್ಲಿ ಪಾಲ್ಗೊಂಡ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. 

ರಾಹುಲ್ ಗಾಂಧಿ ಹತ್ಯೆಗೆ ಯತ್ನ Exclusive ದೃಶ್ಯಾವಳಿ

ಅಮೇಥಿಯಿಂದ ಕ್ಷೇತ್ರದಿಂದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ನಾಮಪತ್ರ ಸಲ್ಲಿಸಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ನಾಮಪತ್ರ ಸಲ್ಲಿಸಿದ್ದಾರೆ. ಈ ಕ್ಷೇತ್ರದಲ್ಲಿ ಐದನೇ ಹಂತದ ಮತದಾನ ಮೇ 6ರಂದು ನಡೆಯಲಿದೆ. ಏಪ್ರಿಲ್ 17 ರಂದು ಇರಾನಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದು ಆದರೆ ಅಂದು ಸರಕಾರಿ ರಜಾ ದಿನವಾದ್ದರಿಂದ ಗುರುವಾರವೇ ನಾಮಪತ್ರ ಸಲ್ಲಿಸಿದ್ದಾರೆ.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.