ಮೈಸೂರು : ಲೋಕಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು,  ಮಂಡ್ಯ ಕಣ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. 

ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ಟಫ್ ಫೈಟ್ ನಡೆಯುತ್ತಿದೆ.  ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ 5 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ

ಫಲಿತಾಂಶದ ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿರುವ ಸಮಲತಾ ಗೆಲುವಿನ ವಿಶ್ವಾದಲ್ಲಿದ್ದಾರೆ. 

ಮಂಡ್ಯ ಜನತೆ ಎಂದಿಗೂ ತಮ್ಮ ಕೈ ಹಿಡಿದಿದ್ದು, ಈಗಲೂ ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. ಫಲಿತಾಂಶ ಹೇಗೆ ಬಂದರೂ ಕೂಡ ಸಮಾನವಾಗಿ ಸ್ವೀಕಾರ ಮಾಡುವುದಾಗಿ ಸುಮಲತಾ ಹೇಳಿದ್ದಾರೆ. 

ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದ ಮಂಡ್ಯ ಕಣದ ಫಲಿತಾಂಶ ಕ್ಷಣ ಕ್ಷಣಕ್ಕೂ ಬದಲಾಗುತ್ತಿದ್ದು,  ಎಲ್ಲರ ಚಿತ್ತ ನೆಟ್ಟಿದ್ದು, ಸಾಕಷ್ಟು ಕುತೂಹಲ ಸೃಷ್ಟಿಸಿದೆ.