ಗುಡ್‌ಫ್ರೈಡೇ ದಿನ ಮತ ಚಲಾವಣೆ ಏಕೆ ಅಸಾಧ್ಯ?|  ತಮಿಳುನಾಡು ಮತ್ತು ಪುದುಚೇರಿಯಲ್ಲಿ ಚುನಾವಣೆ ಮುಂದೂಡಬೇಕು ಎಂಬ ಕೋರಿಕೆಯನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್‌

ನವದೆಹಲಿ[ಏ.05]: ಕ್ರೈಸ್ತ ಧರ್ಮಿಯರ ಹಬ್ಬವಾದ ಗುಡ್‌ಫ್ರೈಡೇ ಹಾಗೂ ಈಸ್ಟರ್‌ ಇರುವ ಹಿನ್ನೆಲೆ ಏ.18ಕ್ಕೆ ನಿಗದಿಯಾದ ಲೋಕಸಭಾ ಚುನಾವಣೆ ದಿನಾಂಕವನ್ನು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮುಂದೂಡಬೇಕು ಎಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ.

ಅಲ್ಲದೆ, ಮತದಾನ ಮಾಡಲು ಮತದಾರರಿಗೆ ಎಷ್ಟುಗಂಟೆಗಳ ಕಾಲ ಸಮಯಾವಕಾಶ ಬೇಕು ಎಂದು ಈ ಕುರಿತು ಅರ್ಜಿ ಸಲ್ಲಿಸಿದ ಕ್ರೈಸ್ತ ಸಮುದಾಯದ ಸಂಘಟನೆ ವಿರುದ್ಧ ಕಿಡಿಕಾರಿದ ಸುಪ್ರೀಂ , ಈ ಅರ್ಜಿಯ ತ್ವರಿತ ವಿಚಾರಣೆಗೆ ನಿರಾಕರಿಸಿದೆ.

ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಾಧೀಶ ಎಸ್‌.ಎ ಬೋಬ್ಡೆ ಅವರು, ವಿಶೇಷ ದಿನದಂದು ನಿಮಗೆ ಮತ ಚಲಾಯಿಸಲು ಸಾಧ್ಯವಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿತು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ