ನವದೆಹಲಿ (ಮಾ. 26):  ಚುನಾವಣೆ ವೇಳೆ ರಾಜಕೀಯ ಪಕ್ಷಗಳು ನಡೆಸುವ ರೋಡ್‌ ಶೋ, ಬೈಕ್‌ ರಾರ‍ಯಲಿಗೆ ನಿಷೇಧ ಹೇರಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ.

ಒತ್ತಡಕ್ಕೆ ಮಣಿದು ಸ್ಪರ್ಧಿಸುತ್ತಿದ್ದೇನೆ ಎಂದ ದೇವೇಗೌಡರ ಆಸ್ತಿ ಎಷ್ಟು?

ಚುನಾವಣೆ ವೇಳೆ ನಡೆಸುವ ರೋಡ್‌ ಶೋ ಮತ್ತು ಬೈಕ್‌ ರಾರ‍ಯಲಿಗಳು ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾದುದು. ಜೊತೆಗೆ ಇದರಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ ಎಂದು ಉತ್ತರಪ್ರದೇಶದ ಮಾಜಿ ಡಿಜಿಪಿ ವಿಕ್ರಮ್‌ಸಿಂಗ್‌ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು.