ಚೆನ್ನೈ :  ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. 

ಇತ್ತೀಚೆಗಷ್ಟೇ ಪಾಕ್ ಉಗ್ರ ಸಂಘಟನೆಗಳ ಮೇಲೆ ವಾಯುದಾಳಿ ನಡೆದಿದ್ದು, ಈ ನಿಟ್ಟಿನಲ್ಲಿ ದೇಶದ ಭದ್ರತೆ ಕಾಪಾಡುವಲ್ಲಿ ಸೂಕ್ತ ನಾಯಕ ಎಂದರೆ ಅದು ನರೇಂದ್ರ ಮೋದಿ ಮಾತ್ರ ಎಂದಿದ್ದಾರೆ. 

,ಏಪ್ರಿಲ್ 18 ರಂದು ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಇದೇ ವೇಳೆ ರಾಜ್ಯದ  ವಿಧಾನಸಭಾ ಕ್ಷೆತ್ರಗಳಿಗೂ ಚುನಾವಣೆ ನಡೆಯಲಿದೆ.  ಈ ನಿಟ್ಟಿನಲ್ಲಿ  ತಮ್ಮ ತವರಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ಹಾಗೂ ಬಲಿಷ್ಠ ನಾಯಕ ಎಂದರು.

ಅತ್ಯಂತ ಬೃಹತ್ ಪ್ರಜಾಪ್ರಭುತ್ವ ದೇಶವಾದ ಭಾರತಕ್ಕೆ ಭದ್ರತೆ ಎನ್ನುವುದು ಅತ್ಯಂತ ಮುಖ್ಯ. ಇದನ್ನು ಕಾಯ್ದುಕೊಳ್ಳಲು ಅತ್ಯಂತ ಸಮರ್ಥ ನಾಯಕರಿಂದಷ್ಟೇ ಸಾಧ್ಯ. ಅದು ನರೇಂದ್ರ ಮೋದಿಯಂತಹ ನಾಯಕರಿಂದ ಎಂದರು. 

 ಮೋದಿ ಅವರ ಆಡಳಿತದಲ್ಲಿ ದೇಶ ಸಾಕಷ್ಟು ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಕಂಡಿದೆ ಎಂದು ಸಿಎಂ ಪಳನಿಸ್ವಾಮಿ ಮೋದಿ ಬಗ್ಗೆ ಮೆಚ್ಚುಗೆ ಮಾತನಾಡಿದರು. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ