ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಗೊಂದಲ ಮುಂದುವರಿದಿದೆ. ದಿವಂಗತ ಅನಂತಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಎನ್ನಲಾಗಿತ್ತು.ಆದ್ರೆ ಅವರು ಮಾಡಿರುವ ಟ್ವೀಟ್ ಟಿಕೆಟ್ ಕೈತಪ್ಪಲಿದ್ಯಾ ಎನ್ನುವ ಪ್ರಶ್ನೆ ಹುಟ್ಟುಹಾಕಿದೆ.
ಬೆಂಗಳೂರು, [ಮಾ.25]: ಲೋಕಸಭಾ ಚುನಾವಣೆ ರಾಜ್ಯದಲ್ಲಿ ರಂಗೇರಿದ್ದು, ನಾಳೆ ಅಂದ್ರೆ ಮಂಗಳವಾರ [ಮಾ.26] ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ.
ಆದ್ರೆ, ಬಿಜೆಪಿ ಇನ್ನು ರಾಜ್ಯದ 4 ಕ್ಷೇತ್ರಗಳಿಗೆ ಟಿಕೆಟ್ ಅನೌನ್ಸ್ ಮಾಡಿಲ್ಲ. ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಯಚೂರು ಹಾಗೂ ಕೊಪ್ಪಳ ಕ್ಷೇತ್ರಗಳಿಗೆ ಬಿಜೆಪಿ ಇನ್ನು ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಇದ್ರಿಂದ ಬಿಜೆಪಿ ಹೈಕಮಾಂಡ್ ಲೆಕ್ಕಚಾರ ಏನು ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಅದರಲ್ಲೂ ಬೆಂಗಳೂರು ದಕ್ಷಿಣ ಟಿಕೆಟ್ ಯಾರಿಗೆ ಎನ್ನುವುದು ಕ್ಷಣ-ಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಆರಂಭದಲ್ಲಿ ತೇಜಶ್ವಿನಿ ಅನಂತ ಕುಮಾರ್ ಅವರಿಗೆ ಟಿಕೆಟ್ ಪಕ್ಕಾ ಎನ್ನಲಾಗಿತ್ತು. ಆದ್ರೆ, ತೇಜಸ್ವಿನಿ ಅನಂತ ಕುಮಾರ್ ಅವರು ಮಾಡಿರುವ ಟ್ವೀಟ್ ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ.
8ನೇ ಪಟ್ಟಿಯಲ್ಲೂ ಇಲ್ಲ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ : ನಿಗೂಢ ನಡೆ
‘ಮೊದಲು ದೇಶ, ಬಳಿಕ ಪಕ್ಷ , ಕೊನೆಗೆ ನಾನು ಎಂದು ತೇಜಸ್ವಿನಿ ಅನಂತ ಕುಮಾರ್ ಟ್ವೀಟ್ ಮಾಡಿದ್ದಾರೆ. ಇದನ್ನು ಗಮನಿಸಿದ್ರೆ ತೇಜಸ್ವಿನಿ ಅನಂತ ಕುಮಾರ್ ಅವರಿಗೆ ಟಿಕೆಟ್ ಕೈತಪ್ಪಲಿದೆಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಇದರ ಸಾರಾಂಶವನ್ನು ಒಂದೇ ವಾಕ್ಯದಲ್ಲಿ ಹೇಳುವುದಾರೇ, ನನಗೆ ಟಿಕೆಟ್ ಸಿಗದಿದ್ದರೆ ಪರವಾಗಿಲ್ಲ, ಮೊದಲು ದೇಶ ಎಂದು ಹೇಳುವ ಮೂಲಕ ಎಲ್ಲರೂ ಮೋದಿ ಕೈ ಬಲಪಡಿಸೋಣ ಎನ್ನುವ ಅರ್ಥದಲ್ಲಿ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.
ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬ ವದಂತಿ ಅಂತಿಮವಾಗಿ ವದಂತಿಯಾಗಿಯೇ ಉಳಿದಿದೆ.
ಇನ್ನೊಂದೆಡೆ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಇವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕೆಂದು ಹೈಕಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
