ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗಕ್ಕೆ ಆಗಮಿಸಿದ್ದ ವೇಳೆ ತಂದಿದ್ದ ಬಾಕ್ಸ್ ನಲ್ಲಿ ಇದ್ದಿದ್ದೇನು ಎಂದು ಇಲ್ಲಿನ ಎಸ್ ಪಿ ಮಾಹಿತಿ ನೀಡಿದ್ದಾರೆ. 

ಚಿತ್ರದುರ್ಗ: ಚಿತ್ರದುರ್ಗ ಸಮಾವೇಶದ ವೇಳೆ ಪ್ರಧಾನಿ ಮೋದಿಯೊಂದಿಗೆ ಆಗಮಿಸಿದ್ದ ಭದ್ರತಾ ಸಿಬ್ಬಂದಿ ರಹಸ್ಯ ಪೆಟ್ಟಿಗೆಯೊಂದನ್ನು ಖಾಸಗಿ ವಾಹನದಲ್ಲಿ ಕೊಂಡೊಯ್ದಿರುವ ವಿಚಾರ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಚಿತ್ರದುರ್ಗ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆ ಪೆಟ್ಟಿಗೆಯಲ್ಲಿದ್ದುದು ‘ಭದ್ರತಾ ಸಲಕರಣೆಗಳು’ ಎಂದು ಭದ್ರತಾ ಸಂಸ್ಥೆಗಳ ಮಾಹಿತಿಯನ್ನು ಆಧರಿಸಿ ತಿಳಿಸಿದ್ದಾರೆ. ‘ಆ ಬಾಕ್ಸ್‌ನಲ್ಲಿ ಭದ್ರತೆಗೆ ಸಂಬಂಧಿಸಿದ ಸಲಕರಣೆಗಳಿದ್ದವು, ಈ ಪೆಟ್ಟಿಗೆಯನ್ನು ಕೊಂಡೊಯ್ಯಲಾದ ಕಾರು ಕೂಡ ಬೆಂಗಾವಲು ಪಡೆಯ ಭಾಗವಾಗಿತ್ತು ಎಂದು ಭದ್ರತಾ ಸಂಸ್ಥೆಗಳಿಂದ ಮಾಹಿತಿ ಬಂದಿದೆ. 

ಹೆಚ್ಚುವರಿ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ’’ ಎಂದು ಎಸ್ಪಿ ಭಾನುವಾರ ಹೇಳಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.