ಲಖನೌ[ಏ.17]: ಗಾಂಧಿ ಕುಟುಂಬದ ಕುಡಿ ವರುಣ್‌ ಗಾಂಧಿ, ಒಂದು ವೇಳೆ ತಾವು ಬಿಜೆಪಿ ತೊರೆದರೆ ಅದು ತಮ್ಮ ರಾಜಕೀಯದ ಕೊನೆಯ ದಿನ. ತಾವು ಬೇರೆ ಯಾವುದೇ ಪಕ್ಷವನ್ನು ಸೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ವರುಣ್‌ ಗಾಂಧಿ, ‘15 ವರ್ಷಗಳ ಹಿಂದೆ ನಾನು ಬಿಜೆಪಿಗೆ ಸೇರಿದ್ದೇನೆ. ನಾನು ಬಿಜೆಪಿ ಸೇರಿದ ದಿನವೇ, ಕಡೆಯವರೆಗೂ ಅಲ್ಲೇ ಇರುವ ನಿರ್ಧಾರ ಕೈಗೊಂಡಿದ್ದೆ ಎಂದು ಹೇಳಿದ್ದಾರೆ.

ಇದೇ ವೇಳೆ ರಾಹುಲ್‌ ವಿರುದ್ಧ ಪ್ರಚಾರ ಕೈಗೊಳ್ಳುವ ಕುರಿತು ಪಕ್ಷದ ಮುಖಂಡರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.