Asianet Suvarna News Asianet Suvarna News

ಮಂಡ್ಯದಲ್ಲಿ ನಿಷೇಧಾಜ್ಞೆ : ಮದ್ಯ ಮಾರಾಟಕ್ಕೂ ಬ್ರೇಕ್

ಮಂಡ್ಯದಲ್ಲಿ ನಿಷೇಧಾಜ್ಞೇ ಜಾರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಮದ್ಯ ಮಾರಾಟಕ್ಕೂ ಕೂಡ ಬ್ರೇಕ್ ಹಾಕಲಾಗುತ್ತಿದೆ. 

Two Days Prohibitory Order In Mandya On May 23 To 24
Author
Bengaluru, First Published May 18, 2019, 10:49 AM IST

ಮಂಡ್ಯ : ಲೋಕಸಭಾ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದ್ದು, ಈ ನಿಟ್ಟಿನಲ್ಲಿ 2 ದಿನಗಳ ಕಾಲ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

"

ಫಲಿತಾಂಶದ ವೇಳೆ ಘರ್ಷಣೆ ಸಂಭವಿಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಮೇ 23 ಹಾಗೂ 24 ರಂದು ನಿಷೇಧಾಜ್ಞೆ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಪಿ.ಸಿ ಜಾಫರ್ ನಿಷೇಧಾಜ್ಞೆ ಜಾರಿಗೆ ಆದೇಶ ನೀಡಿದ್ದಾರೆ. 

ಮೇ 23ರ ಮುಂಜಾನೆ 6 ಗಂಟೆಯಿಂದ  ಮೇ 24ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಡ್ಯ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ವೇಳೆ ಸ್ಫೋಟಕ ಬಳಕೆ, ಗುಂಪಾಗಿ ಸೇರುವುದು. ಸಭೆ ಸೇರುವುದು, ವಿಜಯೋತ್ಸವ ಆಚರಣೆಗೆ ನಿಷೇಧ ಹೇರಲಾಗಿದೆ. ಅಲ್ಲದೇ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಲಾಗಿದೆ. 

ಅಲ್ಲದೇ ನಿಷೇಧಾಜ್ಞೇ ವೇಳೆ ಮಂಡ್ಯ ಜಿಲ್ಲಾಧಿಕಾರಿ ಮದ್ಯ ಮಾರಾಟಕ್ಕೂ ಬ್ರೇಕ್ ಹಾಕಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

Follow Us:
Download App:
  • android
  • ios