ಉಡುಪಿ [ಮಾ. 22]  ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಉಡುಪಿಗೆ ಆಗಮಿಸಿದ್ದಾರೆ. ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಮಧ್ವರಾಜ್ ಕಾಂಗ್ರೆಸ್- ಜೆಡಿಎಸ್ ಚಿಹ್ನೆಯ ಶಾಲು ಧರಿಸಿದ್ದು  ಆಗಮಿಸಿದ್ದು ವಿಶೇಷವಾಗಿತ್ತು.

ಒಂದೇ ಶಾಲಿನಲ್ಲಿ ಎರಡು ಪಕ್ಷದ ಚಿಹ್ನೆ ಮುದ್ರಿಸಿಕೊಂಡಿರುವರುವ ಪ್ರಮೋದ್ ಮಧ್ವರಾಜ್ ಗಮನ ಸೆಳೇದರು. ಇಂತಹ ಶಾಲು ಈವರೆಗೆ ಯಾರೂ ತಯಾರು ಮಾಡಿಲ್ಲ
ಈ ಶಾಲನ್ನು 18 ರ ವರೆಗೆ ತೊಟ್ಟಿರುತ್ತೇನೆ ಎಂದು ಹೇಳಿದರು.

ದೇವೇಗೌಡ ಸ್ಪರ್ಧಿಸೋ ಕ್ಷೇತ್ರ ಫೈನಲ್, ನಾಮಪತ್ರ ಸಲ್ಲಿಸಲು ಮುಹೂರ್ತವೂ ಫಿಕ್ಸ್

ಉಡುಪಿಯಲ್ಲಿ ಕಾಂಗ್ರೆಸ್-  ಜೆಡಿಎಸ್ ಹಾಲು ಜೇನಿನಂತೆ ಬೆರೆಯಲಿದೆ. ನಾನು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮೈತ್ರಿ ಧರ್ಮದಂತೆ ಜೆಡಿಎಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸ್ತೇನೆ. ಕೆಲಸ ಮಾಡುವ ಸಂಸದರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ಇಡೀ ದೇಶದಲ್ಲಿ ಪ್ರಥಮ ಬಾರಿಗೆ ಈ ಅವಕಾಶ ಸಿಕ್ಕಿದೆ. ಮನೆಗೆ ಹೋಗುವ ಮೊದಲು ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟಿದ್ದೇನೆ. ಮಾರ್ಚ್‌ 25 ಕ್ಕೆ ನಾಮಪತ್ರ ಸಲ್ಲಿಸುತ್ತೇನೆ
ಎರಡು ದಿನದಲ್ಲಿ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ. ಕಾಂಗ್ರೆಸ್ ಪಕ್ಷ ಉಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.