ನವದೆಹಲಿ(ಮೇ.21): ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೂ ಎರಡು ದಿನ ಬಾಕಿ ಇರುವಂತೆಯೇ, ಪ್ರಧಾನಿ ಮೋದಿ ಇಂದು ತಮ್ಮ ಸಂಪುಟ ಸಚಿವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಪ್ರಧಾನಿ ಮೋದಿ ಅವರನ್ನು ಅವರ ಸಹೋದ್ಯೋಗಿಗಳು ಸನ್ಮಾಸಿದರು. ಈ ಬಾರಿಯೂ ಎನ್ ಡಿಎ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂಬ ಚುನಾವಣೋತ್ತರ ಸಮೀಕ್ಷೆ ವರದಿ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ರಾತ್ರಿ ಎನ್ ಡಿಎ ಮಿತ್ರಪಕ್ಷಗಳಿಗೆ ಡಿನ್ನರ್ ಪಾರ್ಟಿಗೆ ಆಹ್ವಾನ ನೀಡಿದ್ದು, ಸರ್ಕಾರ ರಚನೆಯ ಸಾಧ್ಯತೆಗಳ ಕುರಿತು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.