ಸುಲ್ತಾನ್‌ಪುರ್(ಮೇ.07): ಸುಲ್ತಾನ್‌ಪುರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ತಾಯಿ ಮನೇಕಾ ಗಾಂಧಿ ಅವರಿಗೆ ಬಿಟ್ಟು ಬೇರೆಯವರಿಗೆ ಮತ ಹಾಕಿದರೆ, ಪಾಕಿಸ್ತಾನಕ್ಕೆ ಮತ ಹಾಕಿದಂತೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ನಮ್ಮ ತಾಯಿಯದ್ದು ಅತ್ಯಂತ ಪವಿತ್ರ ಆತ್ಮ, ಇಂತಹ ಮಾತೆಗೆ ಬಿಟ್ಟು ಬೇರೆಯವರಿಗೆ ಮತ ಹಾಕಿದರೆ ನೀವು ಪಾಕಿಸ್ತಾನಕ್ಕೆ ಸಹಾಯ ಮಾಡಿದಂತೆ ಎಂದು ವರುಣ್ ಗಾಂಧಿ ಹೇಳಿದ್ದಾರೆ.
ಸುಲ್ತಾನ್‌ಪುರ್ ಲೋಕಸಭಾ ಕ್ಷೇತ್ರದ ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿಯನ್ನು, ತಮ್ಮ ಶೂ ಲೇಸ್ ಕಟ್ಟಲು ಇಟ್ಟುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ವರುಣ್ ಗಾಂಧಿ ವಿವಾದ ಸೃಷ್ಟಿಸಿದ್ದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ