ಅಪಘಾತಕ್ಕೀಡಾಗಿದ್ದ ವೃದ್ಧನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಕೈ ಅಭ್ಯರ್ಥಿ!
ಪ್ರಚಾರಕ್ಕೆ ತೆರಳುತ್ತಿದ್ದ ಕೈ ಅಭ್ಯರ್ಥಿ| ಅಪಘಾತಕ್ಕೀಡಾಗಿದ್ದ ವೃದ್ಧ| ವೃದ್ಧನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಬಾಗಲಕೋಟೆ[ಏ.16]: ಅಪಘಾತಕ್ಕಿಡಾಗಿದ್ದ ವೃದ್ಧನಿಗೆ ಆಸ್ಪತ್ರೆಗೆ ಸೇರಿಸುವ ಮೂಲಕ ಬಾಗಲಕೋಟೆ ಜಿಲ್ಲೆಯ ಕೈ ಅಭ್ಯರ್ಥಿ ಮಾನವೀಯತೆ ಮೆರೆದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಅಮೀನಗಡ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬನ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧನ ಕಾಲು, ಕೈಗೆ ಗಾಯಗಳಾಗಿದ್ದವು. ಈ ಸಂದರ್ಭದಲ್ಲಿ ಜಮಖಂಡಿಗೆ ಪ್ರಚಾರಕ್ಕೆ ತೆರಳುತ್ತಿದ್ದ ಕೈ ಅಭ್ಯರ್ಥಿ ವೀಣಾ ಕಾಶಪ್ಪನವರ್ ಇದನ್ನು ಗಮನಿಸಿದ್ದಾರೆ. ಕೂಡಲೇ ವೃದ್ಧನ ಬಳಿ ತೆರಳಿದ ವೀಣಾ ವೃದ್ಧನಿಗೆ ಎಳನೀರು ಪ್ರಾಥಮಿಕ ಚಿಕಿತ್ಸೆ ನೀಡಿಸಿ ಧೈರ್ಯ ತುಂಬಿದ್ದಾರೆ.
ಬಳಿಕ ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡಿದ ಕೈ ಅಭ್ಯರ್ಥಿ ವೀಣಾ ಕಾಶಪ್ಪನವರ್, ವೃದ್ಧನಿಗೆ ಸಹಾಯ ತೋರಿ ಮಾನವೀಯತೆ ಮೆರೆದಿದ್ದಾರೆ.