Asianet Suvarna News Asianet Suvarna News

ಬೆಳಿಗ್ಗೆ ಸೇರ್ಪಡೆ, ಸಂಜೆ ಔಟ್: ಕೈ ಸೇರಿದ ಬಿಜೆಪಿಗರ ದುಸ್ಥಿತಿ!

ಬೆಳಿಗ್ಗೆ ಕಾಂಗ್ರೆಸ್‌ಗೆ, ಸಂಜೆ ಹೊರಕ್ಕೆ!| ಬಿಜೆಪಿ ನಾಯಕರ ‘ದಂಡಯಾತ್ರೆ’| ವಿರೋಧದ ಹಿನ್ನೆಲೆಯಲ್ಲಿ ಸೇರ್ಪಡೆ ರದ್ದುಪಡಿಸಿದ ಕೆಪಿಸಿಸಿ

Yadgir BJP who joins congress in the morning dismissed in the evening
Author
Bangalore, First Published Apr 4, 2019, 8:53 AM IST

ಬೆಂಗಳೂರು[ಏ.04]: ಯಾದಗಿರಿ ಮೂಲದ ಕೆಲ ಬಿಜೆಪಿ ನಾಯಕರನ್ನು ಬುಧವಾರ ಬೆಳಗ್ಗೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸ್ಥಳೀಯ ಕಾಂಗ್ರೆಸ್‌ ನಾಯಕರ ವಿರೋಧದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ಸೇರ್ಪಡೆ ರದ್ದುಗೊಳಿಸಿದ ಘಟನೆ ನಡೆದಿದೆ.

ಬುಧವಾರ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಕೆಲ ಬಿಜೆಪಿ ಮುಖಂಡರು ಕಾಂಗ್ರೆಸ್‌ ಸೇರ್ಪಡೆಗೊಂಡರು. ಈ ಬಗ್ಗೆ ಸ್ಥಳೀಯ ಕಾಂಗ್ರೆಸ್‌ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿರುವುದನ್ನು ಯಾದಗಿರಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ದಿನೇಶ್‌ ಗುಂಡೂರಾವ್‌ ಗಮನಕ್ಕೆ ತಂದರು.

ಇದರ ಬೆನ್ನಲ್ಲೇ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದ ಡಾ. ಭೀಮಾಮೇಟಿ, ದೇವೇಂದ್ರಪ್ಪ ಮನಮಟ್ಟು, ಸಿದ್ದಪ್ಪ ಗುಂಡಳ್ಳಿ, ಭೀಮರೆಡ್ಡಿ ಜಟ್ನಳ್ಳಿ, ಮಲ್ಲಿಕಾರ್ಜುನ್‌ ತಡಿಬಡಿ, ಮಹಾಲಿಂಗರಾವ್‌ ಖಾನಾಪುರ್‌ ಸೇರಿ ಹಲವರ ಸೇರ್ಪಡೆಯನ್ನು ರದ್ದುಗೊಳಿಸಿ ಆದೇಶಿಸಲಾಗಿದೆ.

ಆದೇಶದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಸಲಹೆ ಮೇರೆಗೆ ಮುಖಂಡರ ಸೇರ್ಪಡೆಯನ್ನು ಕಾರಣಾಂತರಗಳಿಂದ ರದ್ದುಗೊಳಿಸಲಾಗಿರುತ್ತದೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಇವರ ಸೇರ್ಪಡೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಲಾಗಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

Follow Us:
Download App:
  • android
  • ios