ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ 'ಟಾಕ್ಸಿಕ್' (Toxic) ಚಿತ್ರದ ಪ್ರತಿಯೊಂದು ಅಪ್‌ಡೇಟ್ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿದ್ದು, ಚಿತ್ರದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೊಸ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಚಿತ್ರದ Toxic ಎರಡನೇ ಹಾಡಿಗೆ ಕೌಂಟ್‌ಡೌನ್ ಶುರು!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿರುವ ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಟಾಕ್ಸಿಕ್ ಚಿತ್ರದ ಎರಡನೇ ಹಾಡು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ವಿಶಾಲ್ ಮಿಶ್ರಾ ಸಂಗೀತದ ಹೊಸ ಸಾಂಗ್‌ಗೆ ಕೌಂಟ್‌ಡೌನ್‌ ಆರಂಭವಾಗಿದೆ. ಚಿತ್ರತಂಡವು 'ತಬಾಹಿ' (Tabahi) ಎಂಬ ಹಾಡನ್ನು ಮಾತ್ರ ಮಾರ್ಚ್‌ನಲ್ಲಿ (March 2, 2026) ಬಿಡುಗಡೆ ಮಾಡಿತ್ತು.

ರಾಕಿಂಗ್ ಸ್ಟಾರ್ ಯಶ್ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಹಾಡಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. 'ತಬಾಹಿ' ಹಾಡಿನ ಭರ್ಜರಿ ಯಶಸ್ಸಿನ ಬಳಿಕ ಮತ್ತೊಂದು ಹೊಸ ಹಾಡು ಯಾವಾಗ ಬರಲಿದೆ ಎಂದು ಕನ್ನಡ ಸೇರಿದಂತೆ ಜಗತ್ತಿನಾದ್ಯಂತ ಸಿನಿರಸಿಕರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಕಾಯುತ್ತಿದ್ದಾರೆ. ಇತ್ತೀಚೆಗೆ ಬಂದ ಸುದ್ದಿಯ ಪ್ರಕಾರ, ವಿಶಾಲ್ ಮಿಶ್ರಾ ಸಂಗೀತದ ವಿಶೇಷ ಟ್ರ್ಯಾಕ್ ಮೂಲಕ ಈ ಹೊಸ ಹಾಡು ವಿಭಿನ್ನ ಹಾಗೂ ವಿಶೇಷ ಎನ್ನುವಂತೆ ಮೂಡಿಬಂದಿದ್ದು, ಹೊರಜಗತ್ತಿಗೆ ಶೀಘ್ರದಲ್ಲಿ ಕಾಲಿಡಲಿದೆ.

ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಸೆನ್ಸೇಷನ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ 'ಟಾಕ್ಸಿಕ್' (Toxic) ಚಿತ್ರದ ಪ್ರತಿಯೊಂದು ಅಪ್‌ಡೇಟ್ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿದ್ದು, ಚಿತ್ರದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೊಸ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಟಾಕ್ಸಿಕ್ ಚಿತ್ರತಂಡ ಇದುವರೆಗೆ 'ತಬಾಹಿ' (Tabahi) ಹಾಡನ್ನು ಮಾತ್ರ ಬಿಡುಗಡೆ ಮಾಡಿತ್ತು. ಆ ಹಾಡು ಸಂಗೀತ ಪ್ರಿಯರು ಹಾಗೂ ಯಶ್ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದಿತ್ತು.

ಸಿಕ್ಕ ಮಾಹಿತಿ ಪ್ರಕಾರ, ಚಿತ್ರದ ಎರಡನೇ ಹಾಡು ಬಿಡುಗಡೆಯಾಗಲಿದ್ದು, ಇದೀಗ ಕೌಂಟ್‌ಡೌನ್‌ ಆರಂಭವಾಗಿದೆ. ಈ ಹಾಡು ಸಿನಿಮಾದ ಪ್ರಮುಖ ಹೈಲೈಟ್‌ಗಳಲ್ಲಿ ಒಂದಾಗಲಿದೆ ಎನ್ನಲಾಗುತ್ತಿದೆ. ಈ ಹಾಡಿನಲ್ಲಿ ರಾಕಿಂಗ್ ಸ್ಟಾರ್ ಯಾವ ನಾಯಕಿಯೊಡನೆ ರೊಮಾನ್ಸ್ ಮಾಡಿದ್ದಾರೆ ಎಂಬ ಕುತೂಹಲದಲ್ಲಿ ಸಿನಿರಸಿಕರು ಕಾಯುತ್ತಿದ್ದಾರೆ.

'ಲೇಡೀಸ್ & ಲೇಡೀಸ್' ಟೀಸರ್ ಭಾರೀ ಸಂಚಲನ

ಅಂದಹಾಗೆ, ಇತ್ತೀಚೆಗೆ ಬಿಡುಗಡೆ ಆಗಿರುವ ಟಾಕ್ಸಿಕ್ ಸಿನಿಮಾದ 'ಲೇಡೀಸ್ & ಲೇಡೀಸ್' ಟೀಸರ್ ಭಾರೀ ಸಂಚಲನ ಸೃಷ್ಟಿಸಿದೆ. ನಯನತಾರಾ, ಕಿಯಾರಾ ಅಡ್ವಾನಿ, ಹಿಮಾ ಖುರೇಶಿ, ರುಕ್ಮಿಣಿ ವಸಂತ್ ಹಾಗೂ ತಾರಾ ಸುತಾರಿಯಾ ಈ ಚಿತ್ರದ ನಾಯಕಿಯರು. ಈ ಪಂಚ ಚಲುವೆಯರಿಗೆ ನಾಯಕರಾಗಿ ಯಶ್ ನಟಿಸಿದ್ದು, ಇದೊಂದು ಪ್ಯಾನ್ ಇಂಡಿಯಾ ಮೀರಿದ ಪ್ಯಾನ್ ವಲ್ಡ್‌ ಸಿನಿಮಾ ಆಗಿದೆ. 26 ಆಗಸ್ಟ್ 2026ರಂದು ಜಗತ್ತಿನಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ.