ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸುಮಾರು 50ಕ್ಕಿಂತಲೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ
ಮಂಗಳೂರು(ಡಿ.06): ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ(ಕೆಪಿಜೆಪಿ)ದಿಂದ ಎಲ್ಲ 224 ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತಯಾರಿ ನಡೆಯುತ್ತಿದ್ದು, 2018ರ ಜನವರಿಯೊಳಗೆ ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಳ್ಳಲಿದೆ ಎಂದು ಪಕ್ಷದ ಸಂಸ್ಥಾಪಕ, ಚಿತ್ರನಟ ಉಪೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸುಮಾರು 50ಕ್ಕಿಂತಲೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದರು. ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಬರುವುದಿದ್ದರೆ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿಯೇ ಬರಬೇಕು ಎಂದರು.
