ಗೆಳೆಯ ಅಭಿಷೇಕ್ ಅಂಬರೀಶ್ ‘ಅಮರ್’ ಸಿನಿಮಾ ಯಶಸ್ಸಿಗೆ ಹಾರೈಸುತ್ತಾ, ಸುಮಲತಾ ಗೆಲುವಿಗೆ ನಿಖಿಲ್ ಕುಮಾರಸ್ವಾಮಿ ಶುಭ ಕೋರಿದ್ದಾರೆ. ನಿಖಿಲ್ ಶುಭಾಷಯಕ್ಕೆ ಅಭಿಷೇಕ್ ಪ್ರತ್ಯುತ್ತರ ನೀಡಿದ್ದಾರೆ.

ರಾಜಕೀಯ ಮರೆತು ಅಭಿಷೇಕ್, ಸುಮಲತಾಗೆ ನಿಖಿಲ್ ವಿಶ್

ಧನ್ಯವಾದ ಗೆಳೆಯ. ನಿಜಕ್ಕೂ ಇದು ಖುಷಿಯ ವಿಚಾರ. ನಿನಗೂ ಗೊತ್ತಿರುತ್ತೆ ಮೊದಲ ಸಿನಿಮಾ ಬಿಡುಗಡೆ ಆಗುವ ದಿನ ಹೇಗಿತ್ತು ಅನ್ನೋದು. ನಿನ್ನ ಮಾತುಗಳು ನನ್ನ ಮೇಲಿರುವ ಪ್ರೀತಿಯನ್ನ ತೋರುತ್ತದೆ. ಮತ್ತು ಕನ್ನಡ ಸಿನಿಮಾ ಇಂಡಸ್ಟ್ರಿಯ ಒಗ್ಗಟ್ಟನ್ನು ಪ್ರದರ್ಶಿಸುತ್ತದೆ. ನಾವಿಬ್ಬರು ಇದೇ ರೀತಿ ಮುಂದುವರೆಯೋಣ. ಒಬ್ಬ ಸ್ನೇಹಿತನಾಗಿ ನಿನ್ನ ಯಶಸ್ಸನ್ನು ಸದಾ ಬಯಸುತ್ತೇನೆ. ಹಿನ್ನಡೆಗಳಿಂದ ನಿರಾಶೆಗೊಳ್ಳಬೇಡ. ಏಕೆಂದರೆ ಅದು ಜೀವನದ ಭಾಗವೆಂದು ನಮಗೆ ತಿಳಿದಿದೆ.

ಕೆಜಿಎಫ್ 2 ಅಖಾಡಕ್ಕೆ ರಾಕಿಭಾಯ್ ಎಂಟ್ರಿ

ಮಂಡ್ಯದ  ಜಿಲ್ಲೆಯ ಬಗ್ಗೆ ನಿಮ್ಮ ಮಾತುಗಳು ಬಹಳ ಪ್ರೋತ್ಸಾಹದಾಯಕವಾಗಿವೆ. ನೀನು ನನ್ನ ತಾಯಿಯ ಪ್ರಯತ್ನವನ್ನು ಬೆಂಬಲಿಸುತ್ತಾ ಮುಂದುವರೆದರೆ ನಾವು ಎಲ್ಲರೂ ಮಂಡ್ಯದ ಸುಧಾರಣೆಗೆ ಒಟ್ಟಿಗೆ ಕೆಲಸ ಮಾಡಬಹುದು. ಮಂಡ್ಯದ ಬಗ್ಗೆ ನೀವು ಹೇಳಿರುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗಲಿ. ನಿಮ್ಮ ಮಾತುಗಳಿಗೆ ಧನ್ಯವಾದಗಳು ಎಂದು ಅಭಿಷೇಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.