ಮೈಸೂರು(ಸೆ.6): ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ’ಕೋರ್ಟ್’ನಿಂದ ಆಗಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಚಿತ್ರನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲ ಸೂಚಿಸಿದ್ದಾರೆ. ತಮ್ಮ ನಟನೆಯ ಚಕ್ರವರ್ತಿ ಚಿತ್ರೀಕರಣವನ್ನು ಸ್ಥಗಿತಗೊಳಿಸುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಇಂದು ಮೈಸೂರಿನ ಪ್ರಿಮಿಯರ್ ಸ್ಟುಡಿಯೋದಲ್ಲಿ ದರ್ಶನ್ ಅಭಿನಯದ ಚಕ್ರವರ್ತಿ ಚಿತ್ರದ ಚಿತ್ರೀಕರಣ ನಡೆಯಬೇಕಿತ್ತು. ಆದರೆ ಚಿತ್ರತಂಡ ಚಿತ್ರೀಕರಣ ಸ್ಥಗಿತಗೊಳಿಸುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ನಿನ್ನೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಇದನ್ನು ಖಂಡಿಸಿ ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ರೈತರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.