ಇದಕ್ಕೆ ಪ್ರತಿಕ್ರಿಯಿಸಿದ ಅಭಿಮಾನಿಗಳು, ನಿಮ್ಮ ಮನೆಯ ಹತ್ತಿರ ಆಹಾರ ಪದಾರ್ಥಗಳನ್ನು ತರುತ್ತೇವೆ. ಅದನ್ನು ದಯವಿಟ್ಟು ಅನಾಥಾಶ್ರಮ, ಸಿದ್ಧಗಂಗಾ ಮಠಕ್ಕೆ ತಲುಪಿಸಬೇಕು ಎಂದು ಪ್ರೀತಿಯಿಂದ ಮನವಿ ಮಾಡಿಕೊಂಡಿದ್ದರು. ದರ್ಶನ್‌ ಆ ಮನವಿಗೆ ಓಗೊಟ್ಟಿದ್ದಾರೆ. ಅಲ್ಲದೇ ಅಭಿಮಾನಿಗಳಿಗೆ ಒಂದು ಪ್ರೀತಿಯ ಪತ್ರ ಬರೆದಿದ್ದಾರೆ. ಆ ಪತ್ರ ಹೀಗಿದೆ-

ಅಭಿಮಾನಿಗಳು ನನ್ನ ಹುಟ್ಟುಹಬ್ಬದ ಪ್ರಯುಕ್ತ ನನ್ನ ಮನೆಯ ಹತ್ತಿರ ಆಹಾರ ಪದಾರ್ಥಗಳನ್ನು ತಂದು ನೀಡುತ್ತೇವೆ. ಅಗನ್ನು ಸಿದ್ದಗಂಗಾ ಮಠ ಹಾಗೂ ಕೆಲವು ಅನಾಥಾಶ್ರಮಕ್ಕೆ ತಲುಪಿಸಿ ಎಂದು ಕೇಳಿಕೊಂಡು ವಿಡಿಯೋ ಮಾಡಿ ಬಿಟ್ಟಿರುವುದು ತುಂಬಾ ಸಂತೋಷದ ವಿಷಯ. ನನ್ನ ಹುಟ್ಟುಹಬ್ಬಕ್ಕೆ ನೀವು ಕೊಡುತ್ತಿರುವ ಉಡುಗೊರೆ ಎಂದು ತಿಳಿದು ಅದನ್ನು ಪ್ರತಿಜಿಲ್ಲೆಯ ಒಂದು ಅನಾಥಾಶ್ರಮಕ್ಕೆ, ಒಂದು ವೃದ್ಧಾಶ್ರಮಕ್ಕೆ ಹಾಗೂ ಸಿದ್ದಗಂಗಾ ಮಠಕ್ಕೆ ತಲುಪಿಸುವ ಜವಾಬ್ದಾರಿಯನ್ನು ತುಂಬಾ ಸಂತೋಷದಿಂದ ನಾನೇ ತೆಗೆದುಕೊಳ್ಳುತ್ತೇನೆ. ಆದಷ್ಟುಬಟ್ಟೆಬ್ಯಾಗ್‌ಗಳನ್ನು ಬಳಸಿ.

ಇಂತಿ ನಿಮ್ಮ ಪ್ರೀತಿಯ ದಾಸ ದರ್ಶನ್‌

 

ದರ್ಶನ್‌ಗೆ ಶುಭ ಹಾರೈಸಿ ಯೂಟ್ಯೂಬ್‌ ಟ್ವೀಟ್‌

ಕನ್ನಡ ಚಿತ್ರದ ಬಗ್ಗೆ ಇದೇ ಮೊದಲು ಟ್ವೀಟ್ ಮಾಡಿದ YouTube!

ದರ್ಶನ್‌ ನಟನೆಯ ‘ಯಜಮಾನ’ ಚಿತ್ರದ ಹಾಡುಗಳು ಮತ್ತು ಟ್ರೈಲರ್‌ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸುತ್ತಿದೆ. ಹಲವಾರು ಮಿಲಿಯನ್‌ ಹಿಟ್ಸ್‌ಗಳನ್ನು ಪಡೆದುಕೊಂಡಿದೆ. ಇಂಥಾ ಸುಸಂದರ್ಭದಲ್ಲಿ ಖುದ್ದು ಯೂಟ್ಯೂಬ್‌ ತನ್ನ ಟ್ವೀಟರ್‌ ಖಾತೆಯಲ್ಲಿ ‘ಯಜಮಾನ’ ಚಿತ್ರದ ಟ್ರೈಲರ್‌ ಲಿಂಕ್‌ ಶೇರ್‌ ಮಾಡಿ, ಈ ಅತಿಥಿ ಗ್ಯಾಂಡ್‌ ಎಂಟ್ರಿ ಕೊಡುತ್ತಿದ್ದಾರೆ ಎಂದು ಟ್ವೀಟ್‌ ಮಾಡಿದೆ. ಇಡೀ ದೇಶ ಕನ್ನಡ ಚಿತ್ರರಂಗದ ಕಡೆಗೆ ನೋಡುತ್ತಿದೆ ಅನ್ನುವುದಕ್ಕೆ ಇದು ಸಾಕ್ಷಿ.