ಸ್ಯಾಂಡಲ್ ವುಡ್ ನಟ ನಿರ್ದೇಶಕ ರಿಷಭ್ ಶೆಟ್ಟಿ ಗಂಡು ಮಗುವಿಗೆ ತಂದೆಯಾಗಿದ್ದಾರೆ.
ರಿಷಭ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಕುಟುಂಬಕ್ಕೆ ಹೊಸ ಅತಿಥಿ ಆಗಮನವಾಗಿದೆ. ಏಪ್ರಿಲ್ 7ರ ಭಾನುವಾರ ಬೆಳಗ್ಗೆ 4 ಗಂಟೆಗೆ ವಿಜಯನಗರದ ಕಾಂಗ್ರೂ ಕೇರ್ ಆಸ್ಪತ್ರೆಯಲ್ಲಿ ಪ್ರಗತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ

ಬಂಧು ಮಿತ್ರರೊಂದಿಗೆ ಮಾರ್ಚ್ 15ರಂದು ಪ್ರಗತಿ ಅದ್ದೂರಿಯಾಗಿ ಸೀಮಂತ ಕಾರ್ಯಕ್ರಮ ನಡೆದಿತ್ತು.
2017 ಫೆಬ್ರವರಿಯಲ್ಲಿ ಪ್ರಗತಿ - ರಿಷಭ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಕ್ಯೂಟ್ ಕಪಲ್ ಈಗ ಗಂಡು ಮಗುವಿನ ತಂದೆ-ತಾಯಿಯಾಗಿದ್ದು, ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿ ಇರುವುದಾಗಿ ತಿಳಿದು ಬಂದಿದೆ.
