ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್, ಪತ್ನಿಯೊಂದಿಗೆ ಎಚ್‌ಎಎಲ್‌ ಏರ್‌ಪೋರ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಡಾ.ರಾಜ್ ಜೀವನ ಚರಿತ್ರೆಯನ್ನು ಉಡುಗೊರೆಯಾಗಿ ನೀಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಹೇಳಲಾಗಿದೆ.

ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್, ಪತ್ನಿಯೊಂದಿಗೆ ಎಚ್‌ಎಎಲ್‌ ಏರ್‌ಪೋರ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪತ್ನಿ ಅಶ್ವಿನಿಯೊಂದಿಗೆ ಭೇಟಿಯಾಗಿ ಡಾ.ರಾಜ್ ಜೀವನ ಚರಿತ್ರೆ 'ಕಾಫಿ ಟೇಬಲ್' ಅನ್ನು ಉಡುಗೊರೆಯಾಗಿ ನೀಡಿದರು. ಇದೊಂದು ಸೌಹಾರ್ದ ಭೇಟಿ ಎಂದು ಹೇಳಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಚಾಮರಾಜನಗರ ಹಾಗೂ ಬೆಂಗಳೂರಿನ ಸಾರ್ವಜನಿಕ ಸಭೆಗಳಲ್ಲಿ ಮೋದಿಯವರು ಡಾ.ರಾಜ್‌ಕುಮಾರ್ ಅವರನ್ನು ಸ್ಮರಿಸಿಕೊಂಡಿದ್ದರು. ಅವರನ್ನು ಪುನೀತ್ ಭೇಟಿಯಾದಾಗ, ಕನ್ನಡದ ಮೇರು ನಟನ ಗುಣಗಾನ ಮಾಡಿದ್ದಾಗಿ ಹೇಳಲಾಗಿದೆ.