ಕೊಡಗು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂದು ಅಭಿಯಾನ | ಈ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಬೆಂಬಲ | ರಶ್ಮಿಕಾ, ಹರ್ಷಿಕಾ ಸಾಥ್
ಕೊಡಗಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ.
ಮುಖ್ಯಮಂತ್ರಿ, ಮೈಸೂರು-ಕೊಡಗು ಸಂಸದ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಎಚ್ಚರಿಸಲು 'ವಿ ನೀಡ್ ಎಮರ್ಜೆನ್ಸಿ ಹಾಸ್ಪಿಟಲ್ ಇನ್ ಕೊಡಗು' ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಟ್ವಿಟರ್ ಅಭಿಯಾನ ಶುರುವಾಗಿದ್ದು, ಜಿಲ್ಲೆಯ ಯುವ ಜನತೆ ಈ ಅಭಿಯಾನಕ್ಕೆ ದೊಡ್ಡ ಪ್ರಮಾಣದಲ್ಲಿ ಕೈ ಜೋಡಿಸಿದ್ದಾರೆ.
ಈ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಿನ್ನೆ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ಬೆಂಬಲ ಸೂಚಿಸಿದ್ದರು. ಈಗ ರಶ್ಮಿಕಾ ಮಂದಣ್ಣ, ಹರ್ಷಿಕಾ ಪೂಣಚ್ಚ ಬೆಂಬಲ ಸೂಚಿಸಿದ್ದಾರೆ.
ನಮಗೆ ತುಂಬಾ ಬೇಕಾಗಿರೋದು ಸುಸಜ್ಜಿತವಾದ ಆಸ್ಪತ್ರೆ. ನಮ್ಮ ಕೂರ್ಗ್ ನಲ್ಲಿ ಆಸ್ಪತ್ರೆ ಇಲ್ಲ. ಒಳ್ಳೆಯ ಆಸ್ಪತ್ರೆಗಾಗಿ ನಾನು ದೂರ ಪ್ರಯಾಣಿಸಬೇಕು. ಕೊಡಗಿನಲ್ಲಿ ಆಸ್ಪತ್ರೆಯಾದರೂ ನಿಜಕ್ಕೂ ಸಹಾಯವಾಗುತ್ತದೆ. ದಯವಿಟ್ಟು ಸ್ಪಂದಿಸಿ ಎಂದು ಸಿಎಂಗೆ ಟ್ಯಾಗ್ ಮಾಡಿದ್ದಾರೆ.
ನಟಿ ಹರ್ಷಿಕಾ ಪೂಣಚ್ಚ ಕೂಡಾ ಬೆಂಬಲ ಸೂಚಿಸಿದ್ದಾರೆ. ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ನನ್ನ ತಂದೆಗೆ ಹುಶಾರಿಲ್ಲದೇ ಇದ್ದಾಗ ನಾನು ಅವರನ್ನು ಬೆಂಗಳೂರಿಗೆ ಕರೆತರಬೇಕಾಯಿತು. ಈ ರೀತಿಯ ತೊಂದರೆ ಯಾರಿಗೂ ಆಗಬಾರದು. ಕೊಡಗಿನಲ್ಲಿ ಆಸ್ಪತ್ರೆ ಬೇಕಾಗಿದೆ. #WeNeedEmergencyHospitalInKodagu ಅಭಿಯಾನಕ್ಕೆ ನಾನು ಸಪೋರ್ಟ್ ಮಾಡುತ್ತೇನೆ. ಈ ಅಭಿಯಾನ ಶುರು ಮಾಡಿದವರಿಗೆ ಧನ್ಯವಾದಗಳು ಎಂದಿದ್ದಾರೆ.
ತಮಿಳು ನಟ ವಿನಯ್ ರೈ ಕೂಡಾ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.
"
