ಇಂದು, ಅಹಮದಾಬಾದ್‌ನಲ್ಲಿ ವಿಮಾನ ದುರಂತ ಸಂಭವಿಸಿದೆ. ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿ 232 ಪ್ರಯಾಣಿಕರು, 10 ಸಿಬ್ಬಂದಿ..
ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್‌ನಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ 133 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಈವರೆಗೆ ಘೋಷಿಸಲಾಗಿದೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ವೈದ್ಯಕೀಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಊಟಕ್ಕೆ ಕುಳಿತಾಗಲೇ ಈ ವಿಮಾನ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಇಬ್ಬೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತದಲ್ಲಿ ಈವರೆಗೆ ಸಂಭವಿಸಿದ ಭೀಕರ ವಿಮಾನ ದುರಂತಗಳಲ್ಲಿ ಇದೂ ಒಂದು ಎನ್ನಬಹುದು.
ಈ ವಿಮಾನ ದುರಂತದ ಬಗ್ಗೆ ಕನ್ನಡದ ನಟಿ ರಮ್ಯಾ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿರುವ ನಟಿ ರಮ್ಯಾ ಅವರು 'ಶಾಕಿಂಗ್' ಎಂದಿದ್ದಾರೆ. 'ಪ್ರಯಾಣಿಕರು ಹಾಗೂ ಅವರ ಕುಟುಂಬಕ್ಕೆ ಪ್ರಾರ್ಥನೆ' ಎಂದು ನಟಿ ರಮ್ಯಾ ಪೋಸ್ಟ್ ಮಾಡುವ ಮೂಲಕ ಈ ಘಟನೆಗೆ ಮನಮಿಡಿದು ಸಂತಾಪ ಸೂಚಿಸಿದ್ದಾರೆ. ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ಸಹ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ, ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕೂಡ ಈ ಅಹಮದಾಬಾದ್ ವಿಮಾನ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.
ಗುರುವಾರ ಮಧ್ಯಾಹ್ನ, ಅಂದರೆ 12 ಜೂನ್ 2025ರಂದು ಭಾರತದಲ್ಲಿ ದೊಡ್ಡ ಪ್ರಮಾಣದ ವಿಮಾನ ದುರಂತ ಸಂಭವಿಸಿದೆ. ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿ 232 ಪ್ರಯಾಣಿಕರು, 10 ಸಿಬ್ಬಂದಿ ಸದಸ್ಯರು ಮತ್ತು 2 ಪೈಲಟ್‌ಗಳು ಪ್ರಯಾಣಿಸುತ್ತಿದ್ದರು. ವಿಮಾನ ಟೇಕ್ ಆಫ್ ಆದ ತಕ್ಷಣವೇ ತಾಂತ್ರಿಕ ತೊಂದರೆಯಿಂದಾಗಿ ಭೂಮಿಗೆ ಪತನಗೊಂಡಿದೆ. ಇದು ಇತ್ತೀಚಿನ ವರ್ಷಗಳಲ್ಲಿ ನಡೆದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲೊಂದು ಎನ್ನಲಾಗುತ್ತಿದೆ.
