ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ 'ರವಿಶಾಸ್ತ್ರಿ' ಚಿತ್ರ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಸ್ನೇಹಾ, 'ಒಗ್ಗರಣೆ' ಹಾಗೂ 'ಕುರುಕ್ಷೇತ್ರ' ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಈ ನಟಿಗೆ ಸೀಮಂತ ಕಾರ್ಯವೂ ಜೋರಾಗಿ ನಡೆದಿದೆ.

 
 
 
 
 
 
 
 
 
 
 
 
 

Beautiful Snaps from Actress Sneha's Baby shower function💛💛😍😍 #Sneha #SnehaPrasanna #Babyshower #FavouriteActress

A post shared by Tamil Serials (@tamilserialexpress) on Oct 4, 2019 at 10:20am PDT

 

ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಸ್ನೇಹ ಹಳದಿ- ಕೆಂಪು ಕಾಂಬಿನೇಷನ್‌ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸೀಮಂತದ ಅಮೂಲ್ಯ ಕ್ಷಣಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕೆಲವು ದಿನಗಳ ಹಿಂದೆ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸ್ನೇಹಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿಯೇ ಬಹಿರಂಗಗೊಳಿಸಿದ್ದರು.

ನಿವೇದಿತಾ-ಚಂದನ್ ಶೆಟ್ಟಿ ಮದ್ವೆ; ಈ ಜೋಡಿ ಲವ್ ಸ್ಟೋರಿ ಕೇಳಿದ್ದೀರಾ?

2009ರಿಂದ ಗೆಳೆಯ ಪ್ರಸನ್ನ ಅವರನ್ನು ಪ್ರೀತಿಸುತ್ತಿದ್ದ ಸ್ನೇಹ 2012ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟಿದ್ದರು. 2015ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮದುವೆ ಹಾಗೂ ಮಗುವಾದ ಬಳಿಕವೂ ಸ್ನೇಹ ತೆಲಗು, ಕನ್ನಡ ಹಾಗೂ ಮಲಯಾಳಂ ಚಿತ್ರಗಳಲ್ಲಿ ಮಿಂಚಿದ್ದಾರೆ.