ನಾಯಕನಟ ಧೃವ ಸರ್ಜಾ ತೀವ್ರ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆ ಸೇರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಒಂದು ವಾರದಿಂದ ಭರ್ಜರಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಸಂಪೂರ್ಣ ರೈನ್ ಎಫೆಕ್ಟ್ ಶೂಟಿಂಗ್'ನಲ್ಲಿ ಭಾಗವಹಿಸಿದ್ದ ಕಾರಣಕ್ಕೆ ಧೃವ ಸರ್ಜಾ ಅವರಿಗೆ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಸದ್ಯ ದೃವ ಸರ್ಜಾಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುಣಮುಣರಾಗುತ್ತಿದ್ದಾರೆ.

ಅವರ ಆರೋಗ್ಯದಲ್ಲಿ ಚೇತರಿಕೆ ಇದ್ದು ಶೀಘ್ರವೇ ಮತ್ತೆ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ ಅಂತ ವೈದ್ಯರು ತಿಳಿಸಿದ್ದಾರೆ.