ಮುಂಬೈ[ಸೆ.7] ಬಾಲಿವುಡ್ ನ ಗಣ್ಯಾತಿ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಐಶ್ವರ್ಯಾ ರೈ ಕಣ್ಣಿರು ಹಾಕಿದ್ದಾರೆ. ಶಬಾನಾ ಆಜ್ಮಿ, ಸೋನು ನಿಗಮ್, ಹುಹಿ ಚಾವ್ಲಾ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿದ್ದರು.

ಐಶ್ವರ್ಯಾ ರೈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಆರಂಭವಾದಾಗ ರೈ ಭಾವೋದ್ವೇಗಕ್ಕೆ ಒಳಗಾಗಿದ್ದಾರೆ.

ಮಹಿಳಾ ಉದ್ಯಮಿಗಳಿಗೆ ಸಂಬಂಧಿಸಿದ ಕಾರ್ಯಕ್ರಮ ಇದಾಗಿತ್ತು. ಉದ್ಯಮದಲ್ಲಿ ಪಾಲ್ಗೊಳ್ಳಲು ಹೊಸ ಉದ್ದಿಮೆ ಸ್ಥಾಪಿಸಲು ಮಹಿಳೆಯರನ್ನು ಪ್ರೇರೇಪಿಸುವ ಕಾರ್ಯಕ್ರಮ ಇದಾಗಿತ್ತು.