ಬೆಂಗಳೂರು (ಜ. 24):  ಕೃಷ್ಣನ್ ಲವ್ ಸ್ಟೋರಿ ಖ್ಯಾತಿಯ ಅಜಯ್ ರಾವ್ ಎಲ್ಲರಿಗೂ ಗೊತ್ತು. ಈಗ ಮತ್ತೊಮ್ಮೆ ಕೃಷ್ಣನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

ಎಕ್ಸ್ ಕ್ಯೂಸ್ ಮೀ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ಅಜಯ್ ರಾವ್ ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ಮ್ಯಾರೇಜ್ ಲವ್ ಸ್ಟೋರಿ, ಕೃಷ್ಣ ಲೀಲಾ, ಸೇರಿದಂತೆ ಇನ್ನು ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕೇವಲ ನಟನೆ ಮಾಡುವುದಲ್ಲದೆ ಕೆಲ ಚಿತ್ರಗಳಿಗೆ ನಿರ್ಮಾಪಕರಾಗಿಯೂ ಕನ್ನಡ ಚಿತ್ರಗದಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಅಜಯ್ ರಾವ್ ಅವರ ಹೊಸ ಚಿತ್ರವೊಂದು ಬರಲಿದೆ. ಈ ಚಿತ್ರದ ಫಸ್ಟ್ ಲುಕ್ ರಿಲೀಸಾಗಿದೆ.

ಗುರು ದೇಶಪಾಂಡೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ರಾಜವರ್ಧನ್ ಶಂಕರ್ ನಿರ್ದೇಶಿಸುತ್ತಿದ್ದಾರೆ.