ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಮರ್ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಕುತೂಹಲ ಮೂಡಿಸಿದೆ. ಸಿನಿಮಾದ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡಿದೆ. ‘ಅಮರ್’ ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. 

ದಾವಣಗೆರೆ ಮೂಲದ ಮಂಜುನಾಥ್ ಅಂಬರೀಶ್ ಅವರ ಕಟ್ಟಾ ಅಭಿಮಾನಿ. ಅಮರ್ ಚಿತ್ರದ ಫಸ್ಟ್ ಡೇ ಫಸ್ಟ್ ಶೋ ನೋಡಲು ಕಾತರರಾಗಿದ್ದಾರೆ.ಚಿತ್ರದ ಮೊದಲ ಟಿಕೆಟ್ ತಾವೇ ಖರೀದಿಸಬೇಕೆಂದು ರಿಲೀಸ್ ಗೂ ಮುನ್ನ ಖರೀದಿಸಿದ್ದಾರೆ.  ನಿರ್ಮಾಪಕ ಸಂದೇಶ್ ನಾಗರಾಜ್ ಅವರಿಗೆ ಮಂಜುನಾಥ್ 1 ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ.

ಅಮರ್ ಚಿತ್ರ ಮೇ 31 ಕ್ಕೆ ರಿಲೀಸಾಗುತ್ತಿದ್ದು ಅಭಿಷೇಕ್ ಅಂಬರೀಶ್ ಹಾಗೂ ತಾನ್ಯಾ ಹೋಪ್ ನಟಿಸಿದ್ದಾರೆ. ನಾಗಶೇಖರ್ ನಿರ್ದೇಶನ ಮಾಡಿದ್ದು ಸಂದೇಶ್ ನಾಗರಾಜ್ ನಿರ್ಮಾಣ ಮಾಡಿದ್ದಾರೆ.  ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.