ಮುಂಬೈ(ಸೆ.17): ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ರಾಜಕೀಯದಲ್ಲಿ ಸೋತಿದ್ದೇ ಅಂತಾ ಖಾಸಗಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ರಾಜಕೀಯದಲ್ಲಿ ಜನರಿಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ನಾನು ವಿಫಲನಾಗಿದ್ದೇನೆ ಎಂದು ಬಿಗ್ ಬಿ ಹೇಳಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಆಪ್ತರಾಗಿದ್ದ ಅಮಿತಾಭ್ ಬಚ್ಚನ್ ಅವರು, ರಾಜಕೀಯಕ್ಕೆ ಸೇರ್ಪಡೆಗೊಳ್ಳುವುದಕ್ಕೆ ಇಷ್ಟವಿಲ್ಲದಿದ್ದರೂ, ಒತ್ತಾಯ ಮೇರೆಗೆ 1984ರಲ್ಲಿ ಅಲಹಾಬಾದ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿದ್ದೆ.
ಆದರೆ, ಆ ಭರವಸೆಯನ್ನು ಈಡೇರಿಸುವಷ್ಟು ಸಾಮರ್ಥ್ಯ ನನ್ನಲ್ಲಿರಲಿಲ್ಲ. ಅಂದು ನಾನು ತೆಗೆದುಕೊಂಡಿದ್ದ ಕೆಲ ನಿರ್ಧಾರಗಳು ಇಂದಿಗೂ ನನ್ನ ಮನಸ್ಸಿಗೆ ನೋವುಂಟು ಮಾಡುತ್ತಿದೆ ಅಂತಾ ಹೇಳಿದ್ದಾರೆ.
