ದ.ಆಫ್ರಿಕಾದಲ್ಲಿ ಕೋಹ್ಲಿ ಶತಕದ ಸಾಧನೆಗೆ ಅನುಷ್ಕಾ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ..?

First Published 17, Feb 2018, 12:07 PM IST
Anushka Sharma Applauds Virat Kohlis Century against South Africa
Highlights

ದಕ್ಷಿಣ ಆಫ್ರಿಕಾದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಅಜೇಯ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್'ಗಳ ಭರ್ಜರಿ ಜಯ ದಾಖಲಿಸಿದೆ.

ಮುಂಬೈ : ದಕ್ಷಿಣ ಆಫ್ರಿಕಾದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಅಜೇಯ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್'ಗಳ ಭರ್ಜರಿ ಜಯ ದಾಖಲಿಸಿದೆ.

ಈ ಮೂಲಕ 6 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಸರಣಿ ಗೆಲುವಿನ ನಗೆ ಬೀರಿದೆ. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರಿದ ನಾಯಕ ವಿರಾಟ್ ಕೊಹ್ಲಿ(558 ರನ್) ಸರಣಿ ಶ್ರೇಷ್ಠ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈ ಬಗ್ಗೆ ವಿರಾಟ್ ಪತ್ನಿ ಅನುಷ್ಕಾ ಮೆಚ್ಚುಗೆ ವ್ಯಕ್ತಪಡಿಸಿ ಇನ್ಸ್ಟಾಗ್ರಾಮ್’ನಲ್ಲಿ ಬರೆದುಕೊಂಡಿದ್ದಾರೆ. ವಾಟ್ ಎ ಗೈ ಎಂದು ಬರೆದುಕೊಂಡು ಚಪ್ಪಾಳೆಯ ಮೋಜಿಗಳನ್ನು ಹಾಕಿ ತಮ್ಮ ಮೆಚ್ಚುಗೆಯೊಂದಿಗೆ ಪ್ರೀತಿಯನ್ನೂ ಹರಿಸಿದ್ದಾರೆ ಅನುಷ್ಕಾ.

ಕಳೆದೆರಡು ದಿನಗಳ ಹಿಂದೆ ತಮ್ಮ ಪತ್ನಿಯ ಹೊಸ ಅವತಾರದ ಚಿತ್ರ ಪರಿಯನ್ನು ನೋಡಲು ಕಾತರರಾಗಿದ್ದಾಗಿ ವಿರಾಟ್ ಟ್ವೀಟ್ ಮಾಡಿದ್ದರು. ಇದೀಗ ಅನುಷ್ಕಾ ಪತಿಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

loader