ಸ್ಯಾಂಡಲ್‌ವುಡ್‌ ರಿಯಲ್​ ಸ್ಟಾರ್ ನಟ​ ಉಪೇಂದ್ರ ವಿರುದ್ಧ ಹಲಸೂರು ಗೇಟ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಆರೋಪದ ಎಫ್ಐಆರ್ ಕುರಿತ ತನಿಖೆಗೂ ಕೂಡ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

ಬೆಂಗಳೂರು (ಆ.14): ಸ್ಯಾಂಡಲ್‌ವುಡ್‌ ರಿಯಲ್​ ಸ್ಟಾರ್ ನಟ​ ಉಪೇಂದ್ರ ವಿರುದ್ಧ ಹಲಸೂರು ಗೇಟ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಆರೋಪದ ಎಫ್ಐಆರ್ ಕುರಿತ ತನಿಖೆಗೂ ಕೂಡ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

ಈಗಾಗಲೇ ರಾಜ್ಯದಲ್ಲಿ ವಿವಾದಾದತ್ಮಕ ಗಾದೆ ಮಾತನ್ನು ಹೇಳುವ ಮೂಲಕ ಜಾತಿನಿಂದನೆ ಆರೋಪದಡಿ ನಟ ಉಪೇಂದ್ರವಿರುದ್ಧ ಮೂರು ಕಡೆಗಳಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಆದರೆ, ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಆಧರಿಸಿ ತನಿಖೆ ಮಾಡದಂತೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆಯನ್ನು ನೀಡಲಾಗಿತ್ತ. ಇಂದು ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಕುರಿತ ಎಫ್‌ಐಆರ್‌ಗೂ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆಯನ್ನು ನೀಡಲಾಗಿದೆ. ಈ ಮೂಲಕ ನಟ ಉಪೇಂದ್ರನಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ನಟ ಉಪೇಂದ್ರನಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌: ಎಫ್‌ಐಆರ್‌ಗೆ ತಡೆ

ಪೊಲೀಸ್‌ ವಿಚಾರಣೆಗೆ ಹಾಜರಾಗದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಉಪೇಂದ್ರ: ಸಾಮಾಜಿಕ ಜಾಲತಾಣದ ಲೈವ್‌ ಕಾರ್ಯಕ್ರಮದಲ್ಲಿ ಯಾವುದೇ ಉದ್ದೇಶಪೂರ್ವಕವಾಗಿ ಹೇಳದೇ ಕೇವಲ ಗಾದೆ ಮಾತನ್ನು ಬಳಸಿದ್ದ ಕಾರಣಕ್ಕಾಗಿ ವಿವಿಧೆಡೆ ಎಫ್‌ಐಆರ್‌ಗಳನ್ನು ಕೆಲವರು ದಾಖಲಿಸಿದ್ದರು. ಇನ್ನು ಬಂಧನದ ಭೀತಿಯಿಂದ ಪೊಲೀಸ್‌ ವಿಚಾರಣೆಗೂ ಹಾಜರಾಗದೇ ನಟ ಉಪೇಂದ್ರ ಎಫ್‌ಐಆರ್‌ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಕಳೆದ ಮೂರು ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಿಂದ ಸಿ.ಕೆ. ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಲಾಗಿತ್ತು.ಆದರೆ, ಇಂದು ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಹರೀಶ್‌ ಎನ್ನುವವರು ನೀಡಿದ್ದ ದೂರಿನ ಆಧಾರದಲ್ಲಿ ದಾಖಲಿಸಿದ್ದ ಎಫ್‌ಐಆರ್‌ಗೆ ತಡೆಯಾಜ್ಞೆ ಕೊಡಲಾಗಿದೆ.

ದಲಿತ ವಿರೋಧಿ ಹೇಳಿಕೆ: ನಟ ಉಪೇಂದ್ರ ವಿರುದ್ಧ ಎಫ್‌ಐಆರ್‌: ಸಚಿವ ಮಲ್ಲಿಕಾರ್ಜುನ ವಿರುದ್ಧ ಕೇವಲ ಎನ್‌ಸಿಆರ್

ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಆದೇಶ: ಇಂದು ಬೆಳಗ್ಗೆ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ನೇತೃತ್ವದ ಏಕಸದಸ್ಯ ಪೀಠದಿಂದ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎಫ್ಐಆರ್‌ ರದ್ದತಿ ಕುರಿತ ಅರ್ಜಿ ವಿಚಾರಣೆ ಮಾಡಲಾಯಿತು. ಈ ವೇಳೆ ನಟ ಉಪೇಂದ್ರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದ್ದಾರೆ. ಈ ವೇಳೆ ಒಂದೇ ಹೇಳಿಕೆ‌ ಮೇಲೆ ಎರಡು ಎಫ್ಐಆರ್ ದಾಖಲಿಸಿದ್ದಾರೆ ಎಂಬುದನ್ನು ಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಘಟನೆಗೆ ಸಂಬಂಧ ಎಲ್ಲಾ ದೂರುಗಳಿಗೂ ತಡೆ ನೀಡುವಂತೆ ಮನವಿ ಮಾಡಿದರು. ಉಪೇಂದ್ರ ಪರ ವಕೀಲರ ಮನವಿ ಪುರಸ್ಕರಿಸಿ ಹೈಕೋರ್ಟ್ ನ್ಯಾಯಾಧೀಶರು ಮಧ್ಯಂತರ ತಡೆಯಾಜ್ಞೆ ಆದೇಶ ನೀಡಿದ್ದಾರೆ.

ವಿಡಿಯೋ ಡಿಲೀಟ್‌ ಮಾಡಿ ಕ್ಷಮೆಯಾಚಿಸಿದ್ದ ಉಪೇಂದ್ರ: 
ವಿವಾದಾತ್ಮಕ ಹೇಳಿಕೆ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಉಪೇಂದ್ರ, "ಇಂದು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು. . ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋ ವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ.. ಮತ್ತು ಈ ಮಾತಿಗೆ ಕ್ಷಮೆಯಿರಲಿ...🙏🙏" ಎಂದು ಬರೆದುಕೊಂಡಿದ್ದರು. ಇನ್ನು ಮೊದಲ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಟ್ವೀಟ್‌ ಮಾಡಿದ್ದರು.