ಮುಂಬೈ[ಜು.04]: ಜೂಜಾಟದಲ್ಲಿ ಭಾಗಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮೈನೇ ಪ್ಯಾರ್‌ ಕಿಯಾ’ ಸಿನಿಮಾ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪತಿ, ನಟ ಹಾಗೂ ನಿರ್ಮಾಪಕ ಹಿಮಾಲಯ ದಾಸನಿ ಅವರನ್ನು ಮಹಾರಾಷ್ಟ್ರದ ಪೊಲೀಸರು ಬಂಧಿಸಿದ್ದಾರೆ.

ಜೂಜಾಟದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ನಿರ್ಮಾಪಕ ದಾಸನಿ ಅವರ ಮನೆಗೆ ತೆರಳಿ ಅವರನ್ನು ವಶಕ್ಕೆ ಪಡೆದ ಪೊಲೀಸರು ಬುಧವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ದಾಸನಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಅಂಬೋಲಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ತನಿಖೆ ವೇಳೆ ಜೂಜಾಟದ ದಂಧೆ ಪತ್ತೆಯಾಗಿದ್ದು ಅದರಲ್ಲಿ ಹಿಮಾಲಯ ದಾಸನಿ ಪಾತ್ರ ಕಂಡು ಬಂದಿತ್ತು. ಈ ಕುರಿತು ಪ್ರಕರಣ ದಾಖಲಾಗಿದೆ.