ಸಮ್ಮತಿಯ ಸಲಿಂಗಕಾಮವನ್ನು ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಮಾನವನ್ನು ಬಾಲಿವುಡ್ ಸೆಲೆಬ್ರಿಟಿಗಳು ಅವರದ್ದೇ ಆದ ಭಾಷೆಯಲ್ಲಿ ಅರ್ಥೈಸಿದ್ದಾರೆ. ಕೆಲವರು ಸಂಭ್ರಮವನ್ನು ಪಟ್ಟಿದ್ದಾರೆ. ಹಾಗಾದರೆ ಬಾಲಿವುಡ್ ನಿಂದ ಬಂದ ಪ್ರತಿಕ್ರಿಯೆ ಏನಿತ್ತು.
ಮುಂಬೈ[ಸೆ.6] ಸಲಿಂಗ ಕಾಮದ ಬಗ್ಗೆ ಐತಿಹಾಸಿಕ ತೀರ್ಪು ಸುಪ್ರೀಂ ಕೋರ್ಟ್ ನಲ್ಲಿ ಹೊರಬಿದ್ದ ನಂತರ ಬಾಲಿವುಡ್ ತನ್ನದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದೆ.
ನ್ಯಾ. ದೀಪಕ್ ಮಿಶ್ರಾ, ಜಸ್ಟೀಸ್ ಫಾಲಿ ನಾರಿಮನ್, ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ್ ಹಾಗೂ ಇಂದು ಮಲ್ಹೋತ್ರಾ ಅವರು ನೀಡಿರುವ ಆದೇಶವನ್ನು 'ಐತಿಹಾಸಿಕ ತೀರ್ಪ'ಎಂದು ಬಾಲಿವುಡ್ ನ ಜನಪ್ರಿಯ ನಟ, ನಿರ್ದೇಶಕ ಕರಣ್ ಜೋಹರ್ ಅವರು ಮುಕ್ತವಾಗಿ ಸ್ವಾಗತಿಸಿದ್ದಾರೆ.
2001ರಲ್ಲಿ ಈ ಕಾಯ್ದೆಯ ವಿರುದ್ಧ ನಾಝ್ ಫೌಂಡೇಷನ್ ಎಂಬ ಎನ್‌ಜಿಒ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು. 2009ರಲ್ಲಿ ಆ ನ್ಯಾಯಾಲಯ ಸಲಿಂಗಕಾಮವನ್ನು ಅಪರಾಧಮುಕ್ತಗೊಳಿಸಿ ಐತಿಹಾಸಿಕ ತೀರ್ಪು ನೀಡಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಕೆಯಾಗಿತ್ತು. 2013ರಲ್ಲಿ ದೆಹಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ, ಸಲಿಂಗಕಾಮವನ್ನು ಅಕ್ರಮ ಎಂದು ಕರೆದಿತ್ತು. ಈ ತೀರ್ಪಿಗೆ ವ್ಯಾಪಕ ಟೀಕೆ-ಟಿಪ್ಪಣಿಗಳು, ಪರ-ವಿರೋಧಗಳು ಕೇಳಿಬಂದಿದ್ದವು.
