ನರೇಂದ್ರ ಮೋದಿ ಇಂದು ಸಂಜೆ ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂತಹ ಸುಮಧುರ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾಯುತ್ತಿದೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ನಾಯಕರು ಸೇರಿದಂತೆ, ಸಿನಿಮಾ, ಕ್ರೀಡೆ ಹೀಗೆ ಬೇರೆ ಬೇರೆ ಕ್ಷೇತ್ರದ ಸೆಲಬ್ರಿಟಿಗಳು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. 

ಬಾಲಿವುಡ್ ನಟ ಶಾಹಿದ್ ಕಪೂರ್, ವಿವೇಕ್ ಒಬೆರಾಯ್, ಅಕ್ಷಯ್ ಕುಮಾರ್,  ನಿರ್ದೇಶಕ ಕರಣ್ ಜೋಹರ್, ನಟಿ ಕಂಗನಾ ರಾಣಾವತ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಶಾರೂಕ್ ಖಾನ್, ಸಲ್ಮಾನ್ ಖಾನ್ ಹಾಗೂ ಅಮೀರ್ ಖಾನ್ ಗೂ ಕೂಡಾ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಭಾಗವಹಿಸುವ ಬಗ್ಗೆ ಇನ್ನೂ ಖಚಿತ ಮಾಹಿತಿ ಸಿಕ್ಕಿಲ್ಲ.

ರಣವೀರ್ ಸಿಂಗ್ ಗೂ ಆಹ್ವಾನ ನೀಡಲಾಗಿದ್ದು ಕಾರಣಾಂತರದಿಂದ ಅವರು ಭಾಗಿಯಾಗುತ್ತಿಲ್ಲ.