ಬ್ರಿಟಿಷ್ ಫಿಲ್ಮ್ ಇನ್ಸ್ಟಿಟ್ಯೂಟ್ಸ್ ‘ಇಂಡಿಯಾ ಆನ್ ಫಿಲ್ಮ್’ ಕಾರ್ಯಕ್ರಮದಲ್ಲಿ ರಾಜವೌಳಿ ಅವರ ಬಾಹುಬಲಿ-ದ ಕಂಕ್ಲುಜನ್ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಎಲಿಜಬೆತ್- 2 ಚಿತ್ರಪ್ರದರ್ಶನವನ್ನು ವೀಕ್ಷಿಸುವ ಸಾಧ್ಯತೆ ಇದೆ.

ನವದೆಹಲಿ(ಮಾ.02): ರಾಜವೌಳಿ ನಿರ್ದೇಶನದ ಬಾಹುಬಲಿ-2 ಚಿತ್ರ ಕೇವಲ ಭಾರತದಲ್ಲಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಎಲ್ಲರೂ ಚಿತ್ರ ಬಿಡುಗಡೆಯಾಗುವುದನ್ನೇ ಕಾಯುತ್ತಿದ್ದಾರೆ. ಇದೀಗ ಬ್ರಿಟನ್ ರಾಣಿ ಎಲಿಜಬೆತ್-2 ಚಿತ್ರದ ಮೊದಲ ಪ್ರರ್ದಶನ ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಬ್ರಿಟಿಷ್ ಫಿಲ್ಮ್ ಇನ್ಸ್ಟಿಟ್ಯೂಟ್ಸ್ ‘ಇಂಡಿಯಾ ಆನ್ ಫಿಲ್ಮ್’ ಕಾರ್ಯಕ್ರಮದಲ್ಲಿ ರಾಜವೌಳಿ ಅವರ ಬಾಹುಬಲಿ-ದ ಕಂಕ್ಲುಜನ್ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಎಲಿಜಬೆತ್- 2 ಚಿತ್ರಪ್ರದರ್ಶನವನ್ನು ವೀಕ್ಷಿಸುವ ಸಾಧ್ಯತೆ ಇದೆ. ಬಾಹುಬಲಿ- 2 ಚಿತ್ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದ್ದು, ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.