ನೂರಾರು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷೆಯ ಸಿನಿಮಾ ‘ಚಕ್ರವರ್ತಿ’ ಮಧ್ಯರಾತ್ರಿ 12 ಗಂಟೆಗೆ ಬಿಡುಗಡೆಯಾಗಿದೆ. ಉತ್ತರಹಳ್ಳಿ ಬಳಿ ಇರುವ ವೈಷ್ಣವಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿದ್ದು, ನೂರಾರು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ವೈಷ್ಣವಿ ಮತ್ತು ವೈಭವ್ ಚಿತ್ರಮಂದಿರದಲ್ಲಿ ಅಭಿಮಾನಿಗಳಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಇನ್ನು ಎಲ್ಲ ಅಭಿಮಾನಿಗಳು ಚಿತ್ರದ ಬಗ್ಗೆ ಒಳ್ಳೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
