ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿಗೊಳಿಸಲಾಗಿದೆ.
ಬೆಂಗಳೂರು(ಅ.11): ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ವಿರುದ್ಧ 16ನೇ ಎಸಿಎಂಎಂ ಕೋರ್ಟ್ ವಾರೆಂಟ್ ಜಾರಿಗೊಳಿಸಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿಗೊಳಿಸಲಾಗಿದೆ. ಸಿನಿಮಾ ಮಾಡುವುದಾಗಿ ಕೋಟ್ಯಂತರ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ರಾಜೇಶ್ ಎಂಬುವವರು ದೂರು ದಾಖಲಿಸಿದ್ದಾರೆ. ಪ್ರಶಾಂತ್ ಮತ್ತು ಗೆಳೆಯರಿಂದ 50 ಲಕ್ಷ ಹಣ ಪಡೆದು ವಂಚಿಸಿದ್ದಾರೆ. ಹತ್ತಕ್ಕೂ ಹೆಚ್ಚು ಜನರಿಗೆ ಸಿನಿಮಾ ಮಾಡುವುದಾಗಿ ಮೋಸ ಮಾಡಿರುವುದಾಗಿ ಆರೋಪ ಮಾಡಲಾಗಿದೆ. ಸದ್ಯ ಪರಾರಿಯಾಗಿರುವ ಅಭಿಮಾನ್ ರಾಯ್ ವಿಚಾರಣೆಗೆ ಹಾಜರಾಗದಿದ್ದಕ್ಕೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿದೆ.

