‘ಪೈಲ್ವಾನ್’ ರಿಲೀಸ್ ಆಗಿದ್ದೇ ಆಗಿದ್ದು ಒಂದಲ್ಲಾ ಒಂದು ರೀತಿಯಲ್ಲಿ ಸುದೀಪ್ ಸುದ್ದಿಯಲ್ಲಿದ್ದಾರೆ. ಡಿಸೆಂಬರ್ 20,2018 ರಲ್ಲಿ 'ಬಿಲ್ಲ ರಂಗ ಭಾಷಾ' ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಇದರ ಬಗ್ಗೆ ಯಾವುದೇ ವಿಚಾರ ಹೊರಬಿದ್ದಿಲ್ಲ.

ಅನೂಪ್ ಭಂಡಾರಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರವನ್ನು ಸುದೀಪ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಅದರೆ ಯಾವುದೇ ಮಾಹಿತಿ ಇಲ್ಲದ ಕಾರಣ ಕೊಂಚ ಬೇಸರ ವ್ಯಕ್ತಪಡಿಸಿದ್ದರು. ಇದನ್ನು ಗಮನಿಸಿದ ಅನೂಪ್ ತಮ್ಮ ಟ್ಟಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೌತ್ ಆಫ್ರಿಕಾ ತಂಡದ ಜೊತೆ ಕಿಚ್ಚನ ಪ್ರಯಾಣ; ಸರ್ಪ್ರೈಸ್ ನೀಡಿದ ಪೈಲ್ವಾನ!

'ಸುದೀಪ್ ಸರ್ ಹಾಗೂ ನಾನು ಬಿಲ್ಲ ರಂಗ ಭಾಷಾ ಚಿತ್ರಕ್ಕೂ ಮುನ್ನ ಶಾಲಿನಿ ಆರ್ಟ್ಸ್ ನಿರ್ಮಾಣದಲ್ಲಿ ಮತ್ತೊಂದು ಅದ್ಧೂರಿ ಚಿತ್ರವನ್ನು ಕೈಗೆತ್ತಿಕೊಳ್ಳುತ್ತಿದ್ದೇವೆ. ಈ ಚಿತ್ರದ ಶೀರ್ಷಿಕೆ, ತಾರಾಗಣ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹ ಸದಾ ಇರಲಿ' ಎಂದು ಟ್ಟೀಟ್ ಮಾಡಿದ್ದಾರೆ.

 

ಸದ್ಯ ಸುದೀಪ್ ಕೋಟಿಗೊಬ್ಬ-3 ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ. ಅನೂಪ್ ಕೆಲ ದಿನಗಳ ಹಿಂದೆ ತೆಲುಗು ನಟ ಅಲ್ಲು ಅರ್ಜುನ್‌ ಭೇಟಿ ಆಗಿರುವ ವಿಚಾರವನ್ನು ಫೋಟೋ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅವರ ಮುಂದಿನ ಸಿನಿಮಾಗಳ ಬಗ್ಗೆ ಕುತೂಹಲ ಹೆಚ್ಚಾಗಿದೆ.