ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 47ನೇ ಸಿನಿಮಾ ಇಂದು ಅನೌನ್ಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ 47 ನೇ ಸಿನಿಮಾ ರಿವೀಲ್ ಮಾಡಲಾಗಿದೆ. ಜುಲೈ 7 ರಿಂದ ಸಿನಿಮಾ ಶೂಟಿಂಗ್ ಪ್ಲಾನ್ ಮಾಡಲಾಗಿದೆ.
ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 'ಬಿಲ್ಲ ರಂಗ ಭಾಷಾ' ಸಿನಿಮಾದಲ್ಲಿ ಬ್ಯುಸಿಯಾಗಿರುವ ಅಭಿನಯ ಚಕ್ರವರ್ತಿ ಇದೀಗ ಮತ್ತೊಮ್ಮೆ ಮ್ಯಾಕ್ಸ್ ಚಿತ್ರ ಮಾಂತ್ರಿಕ ವಿಜಯ್ ಕಾರ್ತಿಕೇಯ ಜೊತೆ ಕೈ ಜೋಡಿಸಿದ್ದಾರೆ. ಮ್ಯಾಕ್ಸ್ ಸೂಪರ್ ಹಿಟ್ ಬಳಿಕ ಮತ್ತೊಮ್ಮೆ ಈ ಜೋಡಿ ಮ್ಯಾಕ್ಸ್ 2ಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತು. ಆದ್ರೆ ಸುದೀಪ್ ಹಾಗೂ ವಿಜಯ್ ಮ್ಯಾಕ್ಸ್ 2 ಪಕ್ಕಕ್ಕಿಟ್ಟು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 47ನೇ ಸಿನಿಮಾ ಇಂದು ಅನೌನ್ಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ 47 ನೇ ಸಿನಿಮಾ ರಿವೀಲ್ ಮಾಡಲಾಗಿದೆ. ಜುಲೈ 7 ರಿಂದ ಸಿನಿಮಾ ಶೂಟಿಂಗ್ ಪ್ಲಾನ್ ಮಾಡಿರುವ ಚಿತ್ರತಂಡ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಸುದೀಪ್ 47ನೇ ಚಿತ್ರವನ್ನು ತಮಿಳಿನ ಬಿಗ್ ಪ್ರೊಡಕ್ಷನ್ ಹೌಸ್ ಸತ್ಯಜ್ಯೋತಿ ಫಿಲಂಸ್ ನಿರ್ಮಾಣ ಮಾಡುತ್ತಿದೆ. ಈ ಹಿಂದೆ ವಿಷ್ಣುವರ್ಧನ್ ಜೊತೆ ಸತ್ಯಜ್ಯೋತಿ ಚಿತ್ರ ನಿರ್ಮಾಣ ಮಾಡಿದ್ದ ಸತ್ಯಜ್ಯೋತಿ ಫಿಲಂಸ್ ಈಗ 39 ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರನಿರ್ಮಾಣಕ್ಕೆ ಕೈ ಹಾಕಿದೆ.
ಚಿತ್ರದ ಕುರಿತು ಮಾತನಾಡಿದ ಸುದೀಪ್, ಮ್ಯಾಕ್ಸ್ ನಂತರ ನಾವು ಮತ್ತೆ ಒಂದಾಗಿದ್ದೇವೆ. ಸದ್ಯಕ್ಕೆ ಮ್ಯಾಕ್ಸ್ 2 ಸಿನಿಮಾ ಕೈ ಬಿಟ್ಟಿದ್ದೀವಿ. ಈ ವರ್ಷ ಎರಡು ಸಿನಿಮಾ ಮಾಡುತ್ತೇವೆ. ಬಿಲ್ಲರಂಗ ಬಾಷ ಸಿನಿಮಾ ಈ ವರ್ಷ ರಿಲೀಸ್ ಆಗಲ್ಲ. ಆದರೆ ಈ ಸಿನಿಮಾ ಇದೇ ವರ್ಷ ಡಿಸೆಂಬರ್ 25 ಕ್ಕೆ ರಿಲೀಸ್ ಮಾಡುತ್ತೇವೆ. ಸೆಪ್ಟೆಂಬರ್ ಕೊನೆಯಲ್ಲಿ ಬಿಗ್ ಬಾಸ್ ಶುರು ಆಗುತ್ತೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ಒಟ್ಟಿನಲ್ಲಿ, ಕನ್ನಡದ ಅಭಿನಯ ಚಕ್ರವರ್ತಿ ಹಾಗೂ ಪ್ಯಾನ್ ಇಂಡಿಯಾ ಸ್ಟಾರ್ ನಟ ಕಿಚ್ಚ ಸುದೀಪ್ ಬಿಗ್ ಬಾಸ್ ಹೋಸ್ಟ್ ಮಾಡುವ ಜೊತೆಜೊತೆಗೆ ಸಿನಿಮಾ ನಟನೆಯನ್ನೂ ಬಿಟ್ಟಿಲ್ಲ. ಈ ಸಂಗತಿ ಅವರ ಅಭಿಮಾನಿಗಳಿಗೆ ತುಂಬಾ ಸಂತೋಷಕೊಡುವ ಸಂಗತಿ. ಮಾಡಲ್ಲ ಅಂದಿದ್ದ ಬಿಗ್ ಬಾಸ್ ನಿರೂಪಣೆಯನ್ನು ಮತ್ತೆ ಮಾಡಲು ಸುದೀಪ್ ಸಜ್ಜಾಗಿದ್ದು ಎಲ್ಲರಿಗೂ ಈಗ ಗೊತ್ತಿರೋ ವಿಷಯ. ಹೊಸ ವಿಷಯ ಎಂದರೆ, ಸಿನಿಮಾದಲ್ಲೂ ಅಷ್ಟೇ ಸಕ್ರಿಯರಾಗಿ ಮುಂದುವರೆಯಲಿದ್ದಾರೆ ಎಂಬುದೇ ಆಗಿದೆ.