ಬೆಂಗಳೂರು[ಫೆ. 24] ಬಂಡೀಪುರದ  ಅವಘಡದ ಬಗ್ಗೆ ಸಿನಿಮಾ ನಾಯಕರು ದನಿ ಎತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ದುನಿಯಾ ವಿಜಯ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಸಹಾಯ ನೀಡುವಂತೆ ಮನವಿ ಮಾಡಿದ್ದಾರೆ.

ಬಂಡಿಪುರದ ಬಗ್ಗೆ ಕ್ಷಣ‌ಕ್ಷದ ಮಾಹಿತಿಯನ್ನು ದರ್ಶನ್ ಪಡೆದುಕೊಳ್ಳುತ್ತಿದ್ದಾರೆ. ನಾಯಕರು ಸೋಶಿಯಲ್ ಮೀಡಿಯಾದ ಮೂಲಕ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯ ರಾಯಭಾರಿ ಆಗಿರುವ  ಚಾಲೆಂಜಿಂಗ್ ಸ್ಟಾರ್ ಮೊದಲ ಹೆಜ್ಜೆ ಇಟ್ಟಿದ್ದು  ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ವನ್ಯಜೀವಿ ಸಂಕುಲಕ್ಕೆ ಸಾಕಷ್ಟು ತೊಂದರೆಯುಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ

ಬೆಂಕಿಯ ಕೆನ್ನಾಲಿಗೆ ಬಂಡೀಪುರದಲ್ಲಿ ಆಕ್ರಮಿಸಿದ ರೀತಿ

ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.