ಬೆಂಗಳೂರು(ನ. 28) ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ಜೀವನ ಕತೆ ಆಧಾರಿತ ‘ತಲೈವಿ’ ಚಿತ್ರದ ಫಸ್ಟ್‌ಲುಕ್‌ ಟೀಸರ್ ಬಿಡುಗಡೆಯಾಗಿದ್ದು ಸದ್ದು ಮಾಡುತ್ತಿದೆ. ಪ್ರತಿಭಾನ್ವಿತ ನಟಿ ಕಂಗನಾ ರಣಾವತ್ ಜಯಲಲಿತಾ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಗೊತ್ತೆ ಇದೆ. 

ನಟಿ ಕಂಗನಾ ‘ತಲೈವಿ’ ಚಿತ್ರಕ್ಕಾಗಿ ತಾವು ಮಾಡಿಕೊಂಡಿರುವ ತಯಾರಿ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಪಾತ್ರಕ್ಕಾಗಿ ನಟಿ ಕಂಗನಾ ಮಾತ್ರೆಗಳನ್ನು ಸೇವಿಸಿ ದೇಹದ ತೂಕವನ್ನು ಹೆಚ್ಚಿಸಿಕೊಂಡಿದ್ದೇನೆ ಎಂದು ಹೇಳಿದ್ದರು. ಆದರೆ ಅಸಲಿ ಕತೆ ಇದಲ್ಲ.

ಕಂಗನಾ ಲುಕ್ ಕಂಡವರು ಕೆಂಡಾಮಂಡಲ

ಚಿತ್ರದ ಸ್ಟ್‌ಲುಕ್‌ ಟೀಸರ್ ಗೆ ಸೋಶಿಯಲ್ ಮೀಡಿಯಾದಲ್ಲಿ ಭಿನ್ನ-ವಿಭಿನ್ನ ಪ್ರತಿಕ್ರಿಯೆ ವ್ಯಕ್ತವಾಗುತ್ತಲೇ ಇವೆ. ಜಯಲಲಿತಾ ಅವತಾರದಲ್ಲಿ ಕಾಣಿಸಿಕೊಂಡಿರುವ ಕಂಗನಾ ಪೋಟೋ ಶೇರ್ ಮಾಡಿಕೊಂಡಿರುವ ನ ನೆಟ್ಟಿಗರೊಬ್ಬರು 'ಎದೆಯ ಮೇಲೆ ಇರಬೇಕಾದ್ದು, ಯಾಕೆ ಭುಜದ ಮೇಲೆ' ಎಂದು ಟ್ರೋಲ್ ಮಾಡಿದ್ದಾರೆ. 

ತಮಿಳಿನಲ್ಲಿ ಜಯಾ ಪಾತ್ರ ಮಾಡುತ್ತಿರುವವರು ಯಾರು?

ಈ ಟ್ವಿಟ್ ಗೆ ಸಾಕಷ್ಟು ಕಮೆಂಟ್ ಗಳು ಬಂದಿವೆ. ಜಯಲಲಿತಾ ಅವರು ಹಳೆಯ ಚಿತ್ರಗಳಲ್ಲಿ ಕಾಣಿಸಿಕೊಂಡ ದೃಶ್ಯಾವಳಿಗಳನ್ನು ಕಮೆಂಟ್ ನಲ್ಲಿ ಶೇರ್  ಮಾಡಿದ್ದಾರೆ. 

ಈ ಕಮೆಂಟ್ ನ್ನು ಅಥವಾ ಫಸ್ಟ್ ಲುಕ್ ಅನ್ನು ಇನ್ನೊಂದು ರೀತಿಯಲ್ಲಿಯೂ ವಿಶ್ಲೇಷಣೆ ಮಾಡಲಾಗಿದೆ. ಜಯಲಿತಾ ಆ ಭಾಗದಲ್ಲಿ ವಾಲೆಟ್ ಇಟ್ಟುಕೊಳ್ಳುತ್ತಿದ್ದರು ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಆದರೆ ಚಿತ್ರತಂಡ ಇಲ್ಲಿಯವರೆಗೆ ಯಾವುದೆ ಸ್ಪಷ್ಟನೆ ನೀಡಿಲ್ಲ.

ಜಯಲಲಿತಾ ರವರ ಜೀವನಚರಿತ್ರೆ ಕುರಿತು ಎರಡು ಸಿನಿಮಾಗಳು ಕಾಲಿವುಡ್ ಮತ್ತು ಬಾಲಿವುಡ್‍ನಲ್ಲಿ ತಯಾರಾಗುತ್ತಿವೆ. ಬಾಲಿವುಡ್‍ನಲ್ಲಿ ಜಯಲಲಿತಾ ಆಗಿ ನಟಿ ಕಂಗನಾ ಕಾಣಿಸಿಕೊಳ್ಳುತ್ತಿದ್ದಾರೆ.

ಫಸ್ಟ್‌ಲುಕ್‌ನಲ್ಲಿ ಹಸಿರು ಸೀರೆ ಮತ್ತು ಹಸಿರು ಮೇಲಂಗಿ ತೊಟ್ಟು ಕಂಗನಾ ರಣಾವತ್ ಗೆಲುವಿನ ಸಂಕೇತವನ್ನು ತೋರಿಸುತ್ತಿದ್ದಾರೆ. ಕಂಗನಾ ಅವರು ಫಸ್ಟ್‌ಲುಕ್‌ಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಇದು ಆನಿಮೇಟೆಡ್  ತರಹ ಕಾಣುತ್ತದೆ ಎಂದು ಹೇಳಿದ್ದಾರೆ.

ಸಿನಿಮಾವನ್ನು ಎ.ಎಲ್ ವಿಜಯ್ ಅವರು ನಿರ್ದೇಶನ ಮಾಡುತ್ತಿದ್ದು, ವಿಷ್ಣುವರ್ಧನ್ ಇದುರೈ ಮತ್ತು ಶೈಲೇಶ್ ಆರ್ ಸಿಂಗ್ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.  ಸಿನಿಮಾ ಹಿಂದಿ, ತಮಿಳು, ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಮುಂದಿನ ವರ್ಷ ಬಿಡುಗಡೆಯಾಗುವ ಸಾಧ್ಯತೆ ಇದೆ.