ನಟಿ ಹರ್ಷಿಕಾ ಪೂಣಚ್ಚ ಕೂಡ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ತಮಗೂ ಕೂಡ ಮೀ ಟೂ  ಅನುಭವವಾಗಿದ್ದಾಗಿ ಹೇಳಿದ್ದಾರೆ. 

ಹುಬ್ಬಳ್ಳಿ: ಚಿತ್ರ ನಟಿ ಶ್ರುತಿ ಹರಿಹರನ್ ಅವರು ‘ಮೀ ಟೂ’ ಅಭಿಯಾನದಡಿ ಬಹುಭಾಷಾ ನಟ ಅರ್ಜುನ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ವನ್ನು ಪ್ರಚಾರ ತಂತ್ರ ಎಂದು ಟೀಕಿಸಿದ್ದ ನಟಿ ಹರ್ಷಿಕಾ ಪೂಣಚ್ಚ ಇದೀಗ, ತನಗೂ ಲೈಂಗಿಕ ಕಿರುಕುಳದ ಅನುಭವವಾಗಿದ್ದು ಅದಕ್ಕಾಗಿಯೇ ಬಾಲಿವುಡ್‌ನಿಂದ ಮರಳಿ ಬಂದಿರುವುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ಕಿರುಕುಳ ಸೇರಿದಂತೆ ಯಾವುದೇ ರೀತಿಯ ಕಿರುಕುಳದಿಂದ ಬೇಸತ್ತ ಮಹಿಳೆಯರು ತಮ್ಮ ನೋವನ್ನು ಹಂಚಿಕೊಳ್ಳಲು ಇರುವ ಏಕೈಕ ಸೂಕ್ತ ವೇದಿಕೆ ಎಂದರೆ ಅದು ಮೀ ಟೂ.

ಆದರೆ, ಕೆಲವರು ಇದನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದರು.