ನಟಿ ಕರೀನಾ ಕಪೂರ್ ಖಾನ್ ಅವರು ಮೂರನೆಯ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆಯೆನ್ನುವ ವಿಡಿಯೋ ವೈರಲ್ ಆಗಿದೆ. ತುಂಬು ಗರ್ಭಿಣಿಯಾಗಿರುವ ಕರೀನಾ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಲ್ಚಲ್ ಸೃಷ್ಟಿಸುತ್ತಿದೆ.
ಬಾಲಿವುಡ್ನ ಸದ್ಯದ ಯಶಸ್ವಿ ಜೋಡಿಗಳಲ್ಲಿ ಒಂದೆನಿಸಿದೆ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಜೋಡಿ. ಎಲ್ಲರಿಗೂ ತಿಳಿದಿರುವಂತೆ ಇದು ಸೈಫ್ ಅಲಿ ಅವರಿಗೆ ಎರಡನೆಯ ಮದುವೆ. ಅವರ ಮೊದಲ ಮದುವೆಯಾದದ್ದು ನಟಿ ಅಮೃತಾ ಸಿಂಗ್ ಅವರ ಜೊತೆಗೆ. ತಮ್ಮ ಮೊದಲ ಮದುವೆಗೆ ಬಂದಿದ್ದ ಕರೀನಾ ಕಪೂರ್ ಅವರನ್ನು ಮಗಳೇ ಎಂದು ಕರೆದಿದ್ದ ಸೈಫ್ ಅಲಿ ನಂತರ ಆಕೆಯನ್ನೇ ಮದುವೆಯಾಗಿ ಟ್ರೋಲ್ಗೂ ಒಳಗಾಗಿದ್ದಿದೆ. ಅದೇನೇ ಇದ್ದರೂ ಸದ್ಯ ಈ ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಈ ಮೂಲಕ ಕರೀನಾಗೆ ಇಬ್ಬರು ಹಾಗೂ ಸೈಫ್ಗೆ ನಾಲ್ವರು ಮಕ್ಕಳಿದ್ದಾರೆ. ಕೆಲವು ಖ್ಯಾತನಾಮ ನಟರಂತೆಯೇ ಸೈಫ್ ಅಲಿ ಕೂಡ ಇಬ್ಬರೂ ಹಿಂದೂ ಯುವತಿಯರನ್ನು ಮದುವೆಯಾಗಿ ಸಕತ್ ಸುದ್ದಿ ಮಾಡಿದವರು. ಸೈಫ್ ಅಲಿ ಖಾನ್ ಕರೀನಾರಿಗಿಂತಲೂ 10 ವರ್ಷ ದೊಡ್ಡವರು. 5 ವರ್ಷಗಳ ಕಾಲ ಲಿವ್-ಇನ್ (Live in relation) ಸಂಬಂಧದಲ್ಲಿದ್ದ ಈ ಜೋಡಿ ಕೊನೆಗೆ ಮದುವೆಯಾಗಿತ್ತು. ಅದಾಗಲೇ ಲವ್ ಜಿಹಾದ್ ಎಂಬ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಸುದ್ದಿಯೇ ಆಗಿಬಿಟ್ಟಿತ್ತು.
ಇದಾಗಲೇ ಇಬ್ಬರು ಮಕ್ಕಳ ಅಮ್ಮನಾಗಿರುವ ಕರೀನಾ ಇದೀಗ 3ನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಕರೀನಾ ತುಂಬು ಗರ್ಭಿಣಿಯಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹಿಂದೊಮ್ಮೆ ಮೂರನೆಯ ಮಗುವಿನ ಬಗ್ಗೆ ಕೇಳಿದಾಗ ನಟಿ ಗರಂ ಆಗಿದ್ದರು. ನಾನೇನು ಮಗು ಹೇರುವ ಮಷಿನ್ನಾ? ನಮ್ಮ ವಿಷಯವನ್ನು ನಮಗೆ ಬಿಟ್ಟುಬಿಡಿ ಎಂದು ಹೇಳಿದ್ದರು. ಆದರೆ ಇದೀಗ ನಟಿ ಗರ್ಭಿಣಿಯಾಗಿರುವ ವಿಡಿಯೋ ಹರಿದಾಡುತ್ತಿದೆ. ಹಾಗೆ ನೋಡಿದರೆ ಈ ವಿಡಿಯೋ ನಟಿಯ ಹಳೆಯ ವಿಡಿಯೋ ಎಂದು ಅನ್ನಿಸುತ್ತದೆ. ಮೊದಲ ಅಥವಾ ಎರಡನೆಯ ಮಗುವಿಗೆ ಗರ್ಭ ಧರಿಸಿದ್ದ ಸಂದರ್ಭದಲ್ಲಿ ತೆಗೆದಿರುವ ವಿಡಿಯೋ ಇದಾಗಿದ್ದಿರಬಹುದು ಎಂದು ನೆಟ್ಟಿಗರು ಹೇಳುತ್ತಿದ್ದರೆ, ಕರೀನಾ ಕಪೂರ್ ಖಾನ್ ಇನ್ನೂ ಕೆಲವು ಮಕ್ಕಳನ್ನು ಹೆತ್ತರೂ ಅಚ್ಚರಿಯೇನಿಲ್ಲ ಎಂದು ಮತ್ತೆ ಕೆಲವರು ಹೇಳುತ್ತಿದ್ದಾರೆ.
ಇನ್ನು ಸೈಫ್ ಮತ್ತು ಕರೀನಾ ಸಂಬಂಧದ ಕುರಿತು ಹೇಳುವುದಾದರೆ, ನಟ ಸೈಫ್ ಅಲಿ ತಮಗಿಂತ 10 ವರ್ಷ ಚಿಕ್ಕವರಾಗಿರುವ ನಟಿ ಕರೀನಾರನ್ನು (Kareena Kapoor) ಮದುವೆಯಾಗಿದ್ದರೆ, ಅಮೃತಾ ಸಿಂಗ್ ಅವರನ್ನು ಮದುವೆಯಾದಾಗ ಸೈಫ್ ಅವರಿಗೆ ವಯಸ್ಸು 21. ಆದರೆ ಅಮೃತಾ ಸಿಂಗ್ ಅವರಿಗೆ 32 ವರ್ಷ ವಯಸ್ಸಾಗಿತ್ತು! ಎಲ್ಲರನ್ನೂ ಎದುರು ಹಾಕಿಕೊಂಡು 12 ವರ್ಷ ಹಿರಿಯ ನಟಿಯನ್ನು ಮದುವೆಯಾಗಿದ್ದರು ಎಂದೇ ಸುದ್ದಿಯಾಗಿತ್ತು. ಇದು ದೊಡ್ಡ ಮಟ್ಟದಲ್ಲಿ ಹಲ್ಚಲ್ ಸೃಷ್ಟಿಸಿತ್ತು. ನಂತರ ಸೈಫ್ ಅಲಿ ಖಾನ್ ಮತ್ತು ಅಮೃತಾ ಸಿಂಗ್ 13 ವರ್ಷಗಳ ದಾಂಪತ್ಯದ ನಂತರ ವಿಚ್ಛೇದನ ಪಡೆದರು. 2004ರಲ್ಲಿ ಸೈಫ್ ಹಾಗೂ ಅಮೃತಾ ತಮ್ಮ ಮದುವೆಯನ್ನು ಕೊನೆಗೊಳಿಸಲು ನಿರ್ಧರಿಸಿದಾಗ ಸಾರಾ 10 ಮತ್ತು ಇಬ್ರಾಹಿಂ 4 ವರ್ಷ ವಯಸ್ಸಿನವರಾಗಿದ್ದರು.
ಅಂದಹಾಗೆ ಇದೀಗ 54 ವರ್ಷದ ಸೈಫ್ ಅಲಿ ಖಾನ್ ಅವರಿಗೆ ಅಮೃತಾ ಸಿಂಗ್ ಮತ್ತು ಕರೀನಾ ಕಪೂರ್ ಈ ಇಬ್ಬರು ಪತ್ನಿಯರಿಂದ ನಾಲ್ವರು ಮಕ್ಕಳಿದ್ದಾರೆ. ಅವರ ಹೆಸರು ಸಾರಾ ಅಲಿ ಖಾನ್ (Sara Ali Khan), ಇಬ್ರಾಹಿಂ ಅಲಿ ಖಾನ್, ತೈಮೂರು ಅಲಿ ಖಾನ್ ಹಾಗೂ ಜೆಹ್ ಅಲಿ ಖಾನ್. ಈಗ ಐದನೆಯ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎನ್ನುವ ಅರ್ಥದ ವಿಡಿಯೋ ವೈರಲ್ ಆಗುತ್ತಿದೆ. ಇದು ಹಳೆಯ ವಿಡಿಯೋ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದರೂ ಸತ್ಯಾಸತ್ಯತೆ ಇನ್ನಷ್ಟೇ ತಿಳಿಯಬೇಕಿದೆ.
