ಮೂರು ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಚಿತ್ರದುರ್ಗ(ಡಿ.9): ಕನ್ನಡದ ಹಾಸ್ಯ ನಟ ದೊಡ್ಡಣ್ಣನವರ ಅಳಿಯನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದಲ್ಲಿರುವ ದೊಡ್ಡಣ್ಣನವರ ಅಳಿಯ ವೀರೇಂದ್ರ ಹಾಗೂ ಅವರ ಅಣ್ಣ ನಾಗರಾಜ ಮನೆ ಮೇಲೆ ದಾಳಿ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದಿರುವ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ.ಬ್ಲ್ಯಾಕ್ ಅಂಡ್ ವೈಟ್ ದಂಧೆ ನಡೆಸುತ್ತಿರುವ ಕಾರಣ ಬೆಂಗಳೂರು, ಹುಬ್ಬಳ್ಳಿ, ಸೇರಿದಂತೆ ದೇಶಾದ್ಯಂತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred