ಭಾರತೀಯ ಚಿತ್ರರಂಗದ ವರ್ಸಿಟೈಲ್ ಆಕ್ಟರ್ ಕಮಲ್ ಹಾಸನ್  ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಕಮಲ್ ಹಾಸನ್ ಈ ವರ್ಷ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಯಾರೂ ತಮ್ಮ ಹುಟ್ಟು ಹಬ್ಬ ಆಚರಿಸಬಾರದು ಎಂದು ಮನವಿ ಮಾಡಿದ್ದಾರೆ.

ಚೆನ್ನೈ(ಅ.25): ಭಾರತೀಯ ಚಿತ್ರರಂಗದ ವರ್ಸಿಟೈಲ್ ಆಕ್ಟರ್ ಕಮಲ್ ಹಾಸನ್ ಹುಟ್ಟು ಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಕಮಲ್ ಹಾಸನ್ ಈ ವರ್ಷ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಯಾರೂ ತಮ್ಮ ಹುಟ್ಟು ಹಬ್ಬ ಆಚರಿಸಬಾರದು ಎಂದು ಮನವಿ ಮಾಡಿದ್ದಾರೆ.

ನವೆಂಬರ್ 7 ರಂದು ಕಮಲ್ ಹಾಸನ್ ಹುಟ್ಟು ಹಬ್ಬವಿದ್ದು, 63 ನೇ ವರ್ಷಕ್ಕೆ ಕಾಲಿಡಲಿದ್ದಾರೆ.