ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜೈಲುವಾಸದಿಂದ ಮುಕ್ತಿ ನೀಡುವಂತೆ ದರ್ಶನ್ ಮನವಿ ಮಾಡಿಕೊಂಡಿರುವ ಮಾಹಿತಿ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ.
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಜೈಲುವಾಸದಿಂದ ಮುಕ್ತಿ ನೀಡುವಂತೆ ದರ್ಶನ್ ಮನವಿ ಮಾಡಿಕೊಂಡಿರುವ ಮಾಹಿತಿ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಲಭ್ಯವಾಗಿದೆ. ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ಗೆ ಜಾಮೀನು ಸಿಕ್ಕಿತ್ತು. ಇದಾದ ಬಳಿಕ ಜಾಮೀನು ರದ್ದಾದ ಹಿನ್ನೆಲೆ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರುವಂತಾಗಿತ್ತು. ಪರಪ್ಪನ ಅಗ್ರಹಾರ ಸೇರಿ ಸುಮಾರು ಎಂಟೂವರೆ ತಿಂಗಳಾಗಿದ್ದು,ಇದೀಗ ಜಾಮೀನಿಗಾಗಿ ವಕೀಲ ರಂಜಿತ್ ರೋಹಟಗಿ ಮೂಲಕ ಸುಪ್ರೀಂಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಮೇ 4ರಂದು ದರ್ಶನ್ ಸಲ್ಲಿಕೆ ಮಾಡಿರುವ ಅರ್ಜಿ ವಿಚಾರಣೆಗೆ ಬರಲಿದೆ. ಅರ್ಜಿಯಲ್ಲಿ ಮನವಿ ಅಂಶಗಳು ಇನ್ನಷ್ಟೇ ಹೊರಬರಬೇಕಿದೆ



