ಈ ಚಿತ್ರಕ್ಕೆ ಸೆನ್ಸಾರ್‌ ಆಗಿದೆ. ಯಾವುದೇ ಕಟ್‌ ಹಾಗೂ ಮ್ಯೂಟ್‌ ಇಲ್ಲದೆ ‘ಯು/ಎ’ ಸರ್ಟಿಫಿಕೇಟ್‌ ನೀಡಲಾಗಿದೆ. ಜುಲೈ 12ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ. ಮಧುಸೂದನ ಕೆ ಆರ್‌ ನಿರ್ದೇಶಿರುವ ಈ ಚಿತ್ರದಲ್ಲಿ ಅದಿತಿ ಪ್ರಭುದೇವ, ನಿರಂಜನ್‌ ಒಡೆಯರ್‌, ಲಿಖಿತ್‌ ಸೂರ್ಯ ಇದ್ದಾರೆ.

ಗೊತ್ತಿರುವ ಲೆಜೆಂಡ್‌ನ ಗೊತ್ತಿಲ್ಲದ ಕಥೆ ಇದು: ಯಜ್ಞಾ ಶೆಟ್ಟಿ

ಕ್ರೈಮ್‌ ಹಾಗೂ ಸಸ್ಪೆನ್ಸ್‌ ಚಿತ್ರದಲ್ಲಿ ನಾನು ಮೊದಲ ಬಾರಿಗೆ ನಟಿಸಿದ್ದೇವೆ. ಅಲ್ಲದೆ ಚಿತ್ರದಲ್ಲಿ ನನ್ನ ಪಾತ್ರವನ್ನು ಬೇರೆ ರೀತಿಯಲ್ಲಿ ರೂಪಿಸಿದ್ದಾರೆ. ಈ ಕಾರಣಕ್ಕೆ ನನಗೆ ಚಿತ್ರದ ಮೇಲೆ ಸಾಕಷ್ಟುಭರವಸೆ ಇದೆ.- ಯಜ್ಞಾ ಶೆಟ್ಟಿ

ಈಗಾಗಲೇ ಚಿತ್ರದ ಟೀಸರ್‌, ಟ್ರೇಲರ್‌ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ರಕ್ಷಿತ್‌ ಶೆಟ್ಟಿ, ಗಣೇಶ್‌, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೀಗೆ ಹಲವರು ಈ ಚಿತ್ರದ ಟೀಸರ್‌, ಟ್ರೈಲರ್‌ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಟ್ರೇಲರ್‌ಗೆ ವಿಶೇಷವಾದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.